Visit Channel

ರಾಜ್ಯದ ಹಲವಡೆ ಇಂದಿನಿಂದ ಶಾಲಾ ಕಾಲೇಜು ಆರಂಭ

file7577zrd9mefd0d5m5if1557122701

ಬೆಂಗಳೂರು ಆ 23 : ರಾಜ್ಯಾದಂತ್ಯ ಇದಿನಿಂದ 9 ರಿಂದ 12ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಈ ಹಿನ್ನಲೆಯಲ್ಲಿ ರೆಡ್ ಜೋನ್ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಪ್ರೌಢ ಶಾಲೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಗಾಗಲೇ ಮರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ಜೊತೆಗೆ ಶಿಕ್ಷಕರಿಗೂ ಲಸಿಕೆ ನೀಡಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪೋಷಕರು ಕೂಡ ಲಸಿಕೆ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಜೊತೆಗೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಅನುಮತಿ ಪತ್ರ ನೀಡಬೇಕೆಂದು ಸಿಎಂ ಸ್ಪಷ್ಟಪಡಿಸಿದರು.

 5 ಜಿಲ್ಲೆಗಳಿಗೆ ಶಾಲಾರಂಭದ ಯೋಗವಿಲ್ಲ:

ರಾಜ್ಯದಲ್ಲಿ ಶೇ 2% ಗಿಂತ ಪಾಸಿಟಿವಿಟಿ ಹೊಂದಿರುವ ರಾಜ್ಯದ 5 ಜಿಲ್ಲೆಗಳಿಲ್ಲಿ ಇನ್ನೂ ಕೂಡ ಶಾಲಾರಂಭಕ್ಕೆ ಅನುಮತಿ ನೀಡಲಾಗಿಲ್ಲ ಅವುಗಳಲ್ಲಿ ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಹಾಸನ ಜಿಲ್ಲೆಗಳಳು ರೆಡ್ ಜೋನ್ ವ್ಯಾಪ್ತಿಯಲ್ಲಿರುವುದರಿಂದ ಈ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲ ಕಾಲೇಜುಗಳು ಪ್ರಾರಭವಾಗುವುದಿಲ್ಲ.

ಸರ್ಕಾರದ ಮಾರ್ಗಸೂಚಿಗಳು :

 • ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ
 • ವಿದ್ಯಾರ್ಥಿಗಳು ಮನೆಯಿಂದಲೇ ನೀರು ಮತ್ತು ಆಹಾರ ತರುವಂತೆ ಸೂಚಿಸಬೇಕು. ಜೊತೆಗೆ ಅವಶ್ಯಕತೆ ಇದ್ದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
  ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್​ ಲ್ಯಾಬ್​​, ಒಳಾಂಗಡ ಕ್ರೀಡಾಗಂಣದಲ್ಲಿ ಶುಚಿತ್ವದ ಜೊತೆ ಸಾಮಾಜಿಕ ಅಂತರ ಕಾಪಾಡುವುದು ಅವಶ್ಯ
 • ಶಾಲೆಗೆ ಹಾಜರಾಗುವ ಶಿಕ್ಷಕರಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಮೂರು ದಿನ ಮುಂಚಿತ ಆರ್​ಟಿಪಿಸಿಆರ್​ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು
 • ಮುಖ್ಯ ಶಿಕ್ಷಕರು ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಒಂದು ಡೋಸ್​ ಲಸಿಕೆ ಪಡೆದಿದ್ದಾರೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜೊತೆಗೆ ಎರಡನೇ ಡೋಸ್​​ ಲಸಿಕೆ ಶೀಘ್ರವಾಗಿ ಪಡೆಯಲು ಪ್ರಯತ್ನಿಸಬೇಕು.
 • ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮಾಸ್ಕ್​ ಧರಿಸುವುದು ಕಡ್ಡಾಯವಾಗಿದೆ.
 • ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಢಾಯವಾಗಿ ಪೋಷಕರಿಂದ ಅನುಮತಿ ಪತ್ರದ ಜೊತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರವನ್ನು ತರಬೇಕು.
 • ವಿದ್ಯಾರ್ಥಿಗಳನ್ನು ಗುಂಪುಗೂಡಿಸುವಂತಹ ಸಭೆ, ಸಮಾರಂಭ, ಹಬ್ಬ ಮತ್ತು ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.
 • ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಲಿಖಿತ ಪತ್ರವನ್ನು ನೀಡಬೇಕು
 • ಒಂದು ಬೆಂಚ್ ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ತರಗತಿಯಲ್ಲಿ ಕೇವಲ 20 ಮಂದಿಗೆ ಮಾತ್ರ ಕೂರಲು ಅವಕಾಶ ನೀಡಬೇಕು.
 • ಇನ್ನೂ ಕೆಲವು ಮಾರ್ಗಸೂಚಿಗಳೊಂದಿಗೆ ಆ 23ರಿಂದ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಗಳನ್ನು ತೆರೆಯಲು ಸರ್ಕಾರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.