ಭಾರತ-ಪಾಕ್ ಕದನ ವಿರಾಮ ನಡೆ ಸ್ವಾಗತಿಸಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಫೆ. 26: ಜಮ್ಮು–ಕಾಶ್ಮೀರದಲ್ಲಿ ಪ್ರಸ್ತುತ ಜಾರಿ ಇರುವ ಕಾರ್ಯತಂತ್ರಗಳ ಮೂಲಕ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮದ ನಿಯಮಗಳನ್ನು ಪಾಲಿಸಲು ಭಾರತ ಮತ್ತು ಪಾಕಿಸ್ತಾನ ಕೈಗೊಂಡಿರುವ ಜಂಟಿ ಕ್ರಮಗಳಿಂದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ತುಂಬಾ ಉತ್ತೇಜಿತರಾಗಿದ್ದಾರೆ’ ಎಂದು ಗುಟೆರಸ್ ಅವರ ವಕ್ತಾರ ಸ್ಟೀಫನೆ ಡುಜರ‍್ರಿಕ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎರಡು ರಾಷ್ಟ್ರಗಳ ನಡುವೆ ಮುಂದೆ ನಡೆಯುವ ಮಾತುಕತೆಗಳಿಗೆ ಅವಕಾಶವನ್ನು ಕಲ್ಪಿಸಲಿದ್ದು, ಚರ್ಚೆಗೆ ದಾರಿಯೂ ಸುಗಮವಾಗಲಿದೆ ಎಂದು ಗುಟೆರಸ್‌ ಅಭಿಪ್ರಾಯಪಟ್ಟಿರುವುದಾಗಿ’ ಡುಜರ‍್ರಿಕ್ ತಿಳಿಸಿದ್ದಾರೆ.

ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರು ಎರಡು ರಾಷ್ಟ್ರಗಳ ನಾಯಕರೊಂದಿಗೆ ಚರ್ಚೆ ನಡೆಸಲಿ ದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡುಜರ‍್ರಿಕ್, ‘ಸದ್ಯಕ್ಕೆ ಅಂತ ಯೋಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಒಳ್ಳೆಯ ಕೆಲಸಗಳಿಗೆ ಸ್ಪಂದಿಸಲು ಪ್ರಧಾನ ಕಾರ್ಯದರ್ಶಿಯವರು ಸದಾ ಸಿದ್ಧರಿರುತ್ತಾರೆ’ ಎಂದು ಹೇಳಿದರು.

ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಅಧ್ಯಕ್ಷ ವೋಲ್ಕನ್ ಬೊಜ್ಕಿಕರ್ ಅವರು, ‘ಗಡಿ ಭಾಗದಲ್ಲಿ ಕದನವಿರಾಮದ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ನಡೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಗಡಿಭಾಗದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಿಕೊಂಡಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.