Visit Channel

ಅತ್ಯಾಚಾರ ನಡೆಸಲು ಮುಂದಾದವನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ!

mcms

ಸಿಧಿ, ಮಾ. 23: ಅತ್ಯಾಚಾರ ಪ್ರಕರಣಗಳಿಗೆ ಶಿಕ್ಷೆ ಕೊಡಿಸಲು ಹಲವಾರು ವರ್ಷ ತೆಗೆದುಕೊಳ್ಳುವ ಈ ಸಂದರ್ಭದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲು ಬಂದ ಕಾಮುಕನೊಬ್ಬನಿಗೆ ಮಹಿಳೆಯೇ ತಕ್ಕ ಪಾಠ ಕಲಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾಳೆ. ಈ ಘಟನೆ ನಡೆದ ಬಳಿಕ ಆಕೆ ಪೊಲೀಸರಿಗೆ ದೂರು ನೀಡಿದ್ದು, ತಾನು ಮಾಡಿದ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.

ಆ ಮಹಿಳೆಯ ಗಂಡ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದ. ಆಕೆ ತನ್ನ 13 ವರ್ಷದ ಮಗನೊಂದಿಗೆ ಮನೆಯಲ್ಲಿದ್ದಾಗ ರಾತ್ರಿ ವೇಳೆ 45 ವರ್ಷದ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿದ್ದ. ಆತ ಕಳ್ಳತನ ಮಾಡಲು ಬಂದಿದ್ದಾನೆ ಎಂದುಕೊಂಡು ಅಮ್ಮ-ಮಗ ಇಬ್ಬರೂ ಭಯದಿಂದ ಮನೆಯಿಂದ ಹೊರಗೆ ಓಡಲು ಮುಂದಾದರು. ಆಗ ಆತ ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ನಡೆಸಲು ಮುಂದಾಗಿದ್ದ. ಆಕೆಯ ಮಗ ಭಯದಿಂದ ಮನೆಯಿಂದ ಹೊರಗೆ ಓಡಿದ್ದ. ಆಗ ಆತನಿಂದ ತಪ್ಪಿಸಿಕೊಳ್ಳಲು ಮಹಿಳೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ರೂಮಿನೊಳಗೆ ಓಡಿ, ಆತನಿಂದ ಬಚಾವಾಗಲು ಪ್ರಯತ್ನಿಸಿದ ಆಕೆ ತನ್ನನ್ನು ರಕ್ಷಿಸಿಕೊಳ್ಳಲು ನೆಲದಲ್ಲಿ ಬಿದ್ದಿದ್ದ ಚಾಕುವಿನಿಂದ ಆತನ ಶಿಶ್ನವನ್ನು ಕತ್ತರಿಸಿದ್ದಾಳೆ. ಆತನ ನೋವಿನಿಂದ ನೆಲದಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ಪೊಲೀಸ್ ಠಾಣೆಗೆ ಹೋದ ಆಕೆ ರಾತ್ರಿ 1.30ರ ಸಮಯದಲ್ಲಿ ದೂರು ನೀಡಿದ್ದಾಳೆ. ತಕ್ಷಣ ಆಕೆಯ ಮನೆಗೆ ತೆರಳಿದ ಪೊಲೀಸರು ಆ ಕಾಮುಕನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.