ಚಿತ್ರಮಂದಿರ 100% ಭರ್ತಿಗೆ ಶೀಘ್ರವೇ ಸಮ್ಮತಿ – ಡಾ. ಕೆ. ಸುಧಾಕರ್

ಬೆಂಗಳೂರು ಸೆ 21 : ಕಳೆದ ಒಂದು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಸಾಕಷ್ಟು ಸಮಯ ಚಿತ್ರಮಂದಿರಗಳು ಮುಚ್ಚಿದ್ದು, ಕಳೆದ ಕೆಲವು ತಿಂಗಳಿನಿಂದ ಕೊರೊನಾ ಕೊಂಚ ಮಟ್ಟಿಗೆ ಕಡಿಮೆಯಾಗಿದ್ದು ಹೀಗಾಗಿ ಶೇ50% ಅನುಮತಿಯನ್ನು ನೀಡಲಾಗಿತ್ತು. ಆದರೆ ಇದೀಗ ಕೊರೊನಾ ಇನ್ನಷ್ಟು ಕಡಿಮೆಯಾಗಿದ್ದು, ರಾಜ್ಯದ ಚಿತ್ರಮಂದಿರಗಳಲ್ಲಿ ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿಷೇಧ‌ವನ್ನು ತೆರವುಗೊಳಿಸಿ, 100%ರಷ್ಟು ಆಸನ ಭರ್ತಿಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದ್ದು ಈ ಹಿನ್ನಲೆಯಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಚಿತ್ರ ನಿರ್ಮಾಪಕರ ಜೊತೆಗೆ ಸಭೆ ನಡೆಸಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮತ್ತು ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ಎರಡು ಮೂರು ದಿನಗಳಲ್ಲಿ‌ಯೇ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ ಕಾರಣದಿಂದ ಚಿತ್ರಮಂದಿರಗಳು ಸಂಪೂರ್ಣ ತೆರೆಯದೇ ಇದ್ದು, ಚಿತ್ರೋದ್ಯಮದ ಸಂಕಷ್ಟ‌ದಲ್ಲಿದೆ. ಈ ನಿಟ್ಟಿನಲ್ಲಿ ಚಿತ್ರಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡುವಂತೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರು ಅವರಿಗೆ ಈ ಭರವಸೆ ನೀಡಿದ್ದಾರೆ.ಮುಂದಿನ ದಿನಗಳಲ್ಲಾದರೂ ಶೇ100% ಪ್ರೇಕ್ಷಕರು ಚಿತ್ರಮಂದಿರತ್ತ ಮುಖ ಮಾಡಲಿ ಎನ್ನುವುದೇ ಚಿತ್ರ ಮಂದಿರ ಮಾಲೀಕರ ಆಶಯವಾಗಿದೆ.

Exit mobile version