Visit Channel

ಇಂದು ಗಾಂಧಿ ಚಿಂತನೆಗಳನ್ನು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

WhatsApp Image 2021-01-30 at 12.44.33 PM

ಬೆಂಗಳೂರು: ಪ್ರಸ್ತುತ ಸಂದರ್ಭದಲ್ಲಿ ಗಾಂಧೀಜಿ ಅವರ ಚಿಂತನೆಗಳು ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮಗೆ ಆದರ್ಶಪ್ರಾಯವೋ, ಹಾಗೆಯೇ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮಗಳ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ, ಅವರು ಬಹುಮುಖ್ಯವಾದ ಕೋಮುಸಾಮರಸ್ಯಕ್ಕಾಗಿ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು.

ಮಹಾತ್ಮ ಗಾಂಧೀಜಿಯವರು ಯಾರನ್ನು ಶತ್ರುಗಳು ಎಂದು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು.

ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಅವರೊಬ್ಬ ಮಹಾನ್ ಸಮಾಜ ಪರಿವರ್ತಕರಾಗಿದ್ದರು.

ಆದರೆ, ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ.

ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವ ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು.

ಸ್ವಾತಂತ್ರ್ಯ ಹೋರಾಟದ ಮೂಲಕ ಬ್ರಿಟಿಷರ ಗುಲಾಮಗಿರಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ, ಗಾಂಧೀಜಿಯವರು ನಮಗೆ ರಾಜಕೀಯ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟರು. ಈಗ ನಾವು ನವವಸಾಹತುಷಾಹಿಗಳ ವಿರುದ್ಧ ಹೋರಾಡಿ ಸಾಮಾಜಿಕ ಸ್ವಾತಂತ್ರ್ಯವನ್ನು ಗಳಿಸಲು ಇನ್ನೊಂದು ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ.

ಇಂದಿನ ಭಾರತದಲ್ಲಿ ಅತ್ಯಂತ ಶೋಷಿತ ಸಮುದಾಯಗಳಾದ ರೈತರು, ಕಾರ್ಮಿಕರು, ಮಹಿಳೆಯರು, ದಲಿತರು ಮಾತ್ರವಲ್ಲ ಈ ದೇಶದ ಯಾವ ಸಾಮಾನ್ಯ ಮನುಷ್ಯ ಕೂಡಾ ಸುರಕ್ಷಿತವಾಗಿಲ್ಲ. ಈ ಅನ್ಯಾಯ, ಶೋಷಣೆ, ಅವಮಾನದ ವಿರುದ್ದ ನಾವು ದನಿ ಎತ್ತದೆ ಹೋದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ.

ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮ ಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ. ರೈತರು ಎರಡು ತಿಂಗಳಿನಿಂದ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಏನೂ ನಡೆದಿಲ್ಲ ಎಂಬಂತೆ ಪ್ರಸನ್ನವದನರಾಗಿದ್ದಾರೆ. ಹೊಸ ಕೃಷಿ ಕಾಯಿದೆಗಳು ರೈತರ ಪರ ಎಂದು ರಾಷ್ಟ್ರಪತಿಯವರ ಮೂಲಕ ಕೇಂದ್ರ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಟೀಕಿಸಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.