ಇಂಧನ ಬೆಲೆಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಪ್ರಸ್ತಾಪವಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ. 16: ಪೆಟ್ರೋಲ್, ಡಿಸೇಲ್ ಹಾಗೂ ಇಂಧನ ಬೆಲೆಗಳು ದಾಖಲೆಯ ಏರಿಕೆಯನ್ನು ಕಾಣುತ್ತಿರುವ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಯಾವುದೇ ಪ್ರಸ್ತಾಪವಿಲ್ಲವೆಂದು ಸೋಮವಾರ(ಮಾ.15)ದಂದು ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.

2017, ಜುಲೈ 1 ರಂದು ಜಿ ಎಸ್ ಟಿಯನ್ನು ಜಾರಿಗೊಳಿಸಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದಾಯಗಳು ಪೆಟ್ರೋಲಿಯಂ ಕ್ಷೇತ್ರವನ್ನು ಅವಲಂಭಿಸಿರುವುದನ್ನು ಆಧರಿಸಿ ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದು ಇಂಧನಗಳ ಮೇಲೆ ಕೇಂದ್ರ ಸರ್ಕಾರವು ಅಬಕಾರಿ ಶುಲ್ಕವನ್ನು ಹಾಗೂ ರಾಜ್ಯ ಸರ್ಕಾರವು ವ್ಯಾಟ್ ಹಾಕುವುದನ್ನು ಮುಂದುವರಿಸಲು ಅವಕಾಶವನ್ನು ಒದಗಿಸಿತ್ತು. ತೆರಿಗೆಯ ಪ್ರಮಾಣ ಕಡಿಮೆಯಾಗುವುದಿಲ್ಲವೆಂದಾದರೇ, ಪೆಟ್ರೋಲ್ ಹಾಗೂ ಡಿಸೇಲ್ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವ ಬೆನ್ನಲ್ಲೇ ಜಿ ಎಸ್ ಟಿ ವ್ಯಾಪ್ತಿಗೆ ಒಳಪಡಿಸಬೇಕೆಂಬ ಮಾತುಗಳು ಕೇಳಿಬಂದಿತ್ತು.

ಸದ್ಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಿನ್ನೆ(ಸೋಮವಾರ, ಮಾರ್ಚ್ 15) ಲೋಕಸಭೆಯಲ್ಲಿ ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಯಾವುದೇ ಪ್ರಸ್ತಾಪವಿಲ್ಲವೆಂದು ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

ಇನ್ನು, ಕಾನೂನಿನನ್ವಯ ಜಿ ಎಸ್ ಟಿ ಮಂಡಳಿಯು ಪೆಟ್ರೋಲಿಯಂ ಕಚ್ಚಾ ತೈಲ, ನೈಸರ್ಗಿಕ ಇಂಧನ ಹಾಗೂ ಹೈಸ್ಪೀಡ್ ಡಿಸೇಲ್, ಪೆಟ್ರೋಲ್ ಗಳ ಮೇಲೆ ಜಿ ಎಸ್ ಟಿ ವಿಧಿಸುವ ದಿನಾಂಕವನ್ನು ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ನಿರ್ಮಲಾ ಹೇಳಿದ್ದಾರೆ.

Exit mobile version