ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಖಡಕ್ ಸಂದೇಶ್ ಕೊಟ್ಟ ಯಡಿಯೂರಪ್ಪ

ಹೊಸದಿಲ್ಲಿ, ಜು. 17: ಭಾರೀ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು
ದೆಹಲಿಯಿಂದಲೇ ವಿರೋಧಿ ಬಣಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

ವರಿಷ್ಠರು ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ, ಹಲವು‌ ವಿಷಯಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಸಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರ ಶುದ್ಧ ಸುಳ್ಳು. ರಾಜೀನಾಮೆ ನಿಡುವಂತೆ ಹೈಕಮಾಂಡ್ ನನಗೆ ಸೂಚಿಸಿಲ್ಲ. ಹಾಗಾಗಿ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Exit mobile version