ಈ ಬಾರಿ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶ: ಸುಪ್ರೀಂ ಆದೇಶ

ನವದೆಹಲಿ, ಆ. 18: ಮಹಿಳೆಯರು ಕೂಡ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್​ಡಿಎ) ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಭಾರತದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಲು ಮಹಿಳೆಯರಿಗೆ ಕೂಡ ಅವಕಾಶ ಕಲ್ಪಿಸಬೇಕು. ಕೇಂದ್ರ ಸರ್ಕಾರ ತನ್ನ ಪೂರ್ವಗ್ರಹ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದು ನ್ಯಾಯಾಲಯ ಘೋಷಿಸಿದೆ. ಇದೇ ಸೆಪ್ಟೆಂಬರ್ 5ರಂದು ಎನ್​ಡಿಎ (NDA) ಪರೀಕ್ಷೆ ನಡೆಯಲಿದೆ. ಈ ವರ್ಷದಿಂದಲೇ ಈ ಆದೇಶ ಜಾರಿಯಾಗಲಿದೆ.

ಇದುವರೆಗೂ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಲು ಯುವತಿಯರಿಗೆ ಅವಕಾಶ ನೀಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಮಾನತೆಯ ದೃಷ್ಟಿಯಿಂದ ಈ ಆದೇಶ ಬಹಳ ಮಹತ್ವದ್ದಾಗಿದೆ. ಸೆಪ್ಟೆಂಬರ್ 5ರಂದು ನಡೆಯುವ ಪರೀಕ್ಷೆಯ ನಂತರ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಅಂತಿಮ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆಯುತ್ತಿರುವ ವಿಚಾರಣೆಯ ಬಳಿಕ ನಿರ್ಧಾರವಾಗಲಿದೆ.

Exit mobile version