- ಕೆಲಸದಲ್ಲಿದ್ದ ಕಾರ್ಮಿಕರ ಮೇಲೆ ಏಕಾಏಕಿ ಮಣ್ಣು ಕುಸಿದು ದುರಂತ; ಶೋಧ ಕಾರ್ಯ ಮುಂದುವರಿಕೆ (Three labourers died in Hulikal land slide)
Shivamogga : ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಹುಲಿಕಲ್ ಘಾಟ್ ಪ್ರದೇಶದಲ್ಲಿ ನಡೆದ ದುರ್ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. (Three labourers died in Hulikal land slide)
ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಾಟ್ ಮಾರ್ಗಗಳಲ್ಲಿ (On the Ghat routes) ಒಂದಾದ ಈ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು (Three workers) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಸ್ತೆ ಅಭಿವೃದ್ಧಿ ಕಾಮಗಾರಿ ವೇಳೆ ಇಂತಹ ದುರಂತ ಸಂಭವಿಸಿರುವುದು ಭದ್ರತಾ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.
ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ (hospital) ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವುದರೊಂದಿಗೆ ಮಣ್ಣಿನಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ದುರ್ಘಟನೆ ಸಂಭವಿಸಿದ ಸ್ಥಳವು ಹುಲಿಕಲ್ ಘಾಟ್‌ನ ಶ್ರೀ ಚಂಡಿಕಾ ಪರಮೇಶ್ವರಿ ದೇವಾಲಯದ ಸಮೀಪದ ಹೇರ್ ಪಿನ್ ತಿರುವು (Hairpin twist) ಎಂದು ತಿಳಿದುಬಂದಿದೆ.
ಇದೇ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಕೆಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ.
ಮೃತರಾದವರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬಿರ್ (30) ಎಂದು ಗುರುತಿಸಲಾಗಿದೆ. (Three labourers died in Hulikal land slide)
ಇನ್ನು ಮಣ್ಣಿನಡಿ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು (Rescue operation) ತೀವ್ರಗೊಳಿಸಲಾಗಿದೆ.
ಮಳೆಗಾಲದ ಸಮಯದಲ್ಲಿ ಘಾಟ್ ಪ್ರದೇಶಗಳಲ್ಲಿ ಕಾಮಗಾರಿ ನಡೆಸುವಾಗ ಸೂಕ್ತ ಭದ್ರತಾ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.
