ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನ ತಾಯಿ (Tiger Claw Locket – Jaggesh Tweet) ಕಾಣಿಕೆ ಬಗ್ಗೆ ನೆನ್ನೆಯಿಂದ
ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ ಎಂದು ನಟ ಹಾಗೂ ಸಂಸದ ಜಗ್ಗೇಶ್ (Jaggesh) ಪ್ರತಿಕ್ರಿಯಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹುಲಿ ಉಗುರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಸದ ಜಗ್ಗೇಶ್ ಅವರ ಬಳಿಯೂ ಹುಲಿ ಉಗುರು ಇರುವ ಲಾಕೆಟ್ (Locket) ಕುರಿತು
ಸ್ವತಃ ಜಗ್ಗೇಶ ಅವರೇ ಮಾತನಾಡಿದ್ದ ವಿಡಿಯೋ ವೈರಲ್ (Video Viral) ಆದ ನಂತರ ಅವರ ಮನೆಯ ಮೇಲೂ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಅದನ್ನು ವಶಕ್ಕೆ
ಪಡೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ
ಮಾಡುವ 100 ಜನರು (Tiger Claw Locket – Jaggesh Tweet) ಇದ್ದೆ ಇರುತ್ತಾರೆ.
But remember one thing ಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದುಮಾಡಿ,
ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ. ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ
ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ
ಕೆಲಸ ಮಾಡಿಲ್ಲಾ ಮಾಡೋದಿಲ್ಲಾ ಎಂದು ಬರೆದುಕೊಂಡಿದ್ದಾರೆ.
ಇನ್ನು ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಆರೋಪದ ಮೇಲೆ ಬಿಗ್ಬಾಸ್ (Big Boss) ಸ್ಪರ್ಧಿ ಹಾಗೂ ಹಳ್ಳಿಕಾರ ಖ್ಯಾತಿಯ ವರ್ತೂರು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ ನಂತರ ಹುಲಿ
ಉಗುರಿನ ಲಾಕೆಟ್ ಧರಿಸಿರುವ ಇತರರ ಮೇಲೂ ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ.
ಇದನ್ನು ಓದಿ: ಸೈಬರ್ ಕ್ರೈಮ್: ಇಮೇಲ್ನಲ್ಲಿ ಬರುವ ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುತ್ತಿದ್ದರೆ ಇರಲಿ ಎಚ್ಚರ!