- IPL 2026 ಉದ್ಘಾಟನೆಗೆ ಬೆಂಗಳೂರು ಸಜ್ಜು – ಸ್ಟೇಡಿಯಂ ಸುತ್ತ ಭದ್ರತಾ ಕವಚ (Tight security around Chinnaswamy Stadium for IPL 2026)
- RCB vs SRH ಪಂದ್ಯಕ್ಕೆ ಭಾರೀ ಭದ್ರತೆ: ಸ್ಟೇಡಿಯಂ ಸುತ್ತ 2,000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆ
- ಐಪಿಎಲ್ ಪಂದ್ಯ ಹಿನ್ನೆಲೆ ವಾಹನ ನಿಲುಗಡೆ ನಿರ್ಬಂಧ, ಸಾರ್ವಜನಿಕರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ
Bengaluru: ಬೆಂಗಳೂರು ನಗರದಲ್ಲಿ ಇಂದು ನಡೆಯಲಿರುವ ಐಪಿಎಲ್ 2026 (IPL 2026) ಉದ್ಘಾಟನಾ ಪಂದ್ಯವನ್ನು ಹಿನ್ನೆಲೆ ಮಾಡಿಕೊಂಡು ರಾಜ್ಯ ಸರ್ಕಾರ (State Govt) ಹಾಗೂ ಪೊಲೀಸ್ ಇಲಾಖೆ (Police Department) ಭದ್ರತಾ ಕ್ರಮಗಳನ್ನು ಕಠಿಣಗೊಳಿಸಿದೆ.(Tight security around Chinnaswamy Stadium for IPL 2026)
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ( M. Chinnaswamy Stadium) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ ಪಂದ್ಯಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.
ಕಳೆದ ವರ್ಷ ಸಂಭವಿಸಿದ ಕಾಲ್ತುಳಿತ ಘಟನೆ ಹಿನ್ನೆಲೆ ಈ ಬಾರಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು(Precautionary measures) ಕೈಗೊಳ್ಳಲಾಗಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿ ಶಲಿನಿ ರಾಜನೀಶ್ (Shalini Rajneesh) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭದ್ರತೆ, ಸಂಚಾರ ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಸ್ಟೇಡಿಯಂ ಒಳಗೆ ಹಾಗೂ ಹೊರಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಸುಮಾರು ಸಾವಿರಾರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ವಿಶೇಷ ಭದ್ರತಾ ತಪಾಸಣೆ ನಡೆಸಲಾಗುತ್ತದೆ.
ಜನಸಂದಣಿ ನಿಯಂತ್ರಣಕ್ಕಾಗಿ ಪ್ರತ್ಯೇಕ ಮಾರ್ಗಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳು ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕುಡಿಯುವ ನೀರು, ವೈದ್ಯಕೀಯ ನೆರವು, ತುರ್ತು ಸೇವೆಗಳು (Emergency services) ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂದ್ಯದ ಹಿನ್ನೆಲೆ ನಗರದ ಹಲವಾರು ಪ್ರಮುಖ ರಸ್ತೆಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಮಧ್ಯಾಹ್ನದ ನಂತರ ಕೆಲವು ರಸ್ತೆಗಳಲ್ಲಿ ವಾಹನಗಳ ನಿಲುಗಡೆ ಸಂಪೂರ್ಣ ನಿಷೇಧ ಮಾಡಲಾಗಿದೆ.
ಬಾಳೇಕುಂದಿ ವೃತ್ತದಿಂದ (From Balekundi Circle) ಕ್ವೀನ್ಸ್ ವೃತ್ತದವರೆಗೆ, (Up to Queens Circle),ಅನಿಲ್ ಕುಂಬ್ಳೆ ವೃತ್ತದಿಂದ (Anil Kumble Circle) ಎಂ.ಜಿ ರಸ್ತೆ (MG Road) ಭಾಗದವರೆಗೆ, ಕಬ್ಬನ್ ರಸ್ತೆ,
ರಾಜಭವನ ರಸ್ತೆ, ರೇಸ್ ಕೋರ್ಸ್ ರಸ್ತೆ(Race Course Road,), ಸೆಂಟ್ರಲ್ ಸ್ಟ್ರೀಟ್, ಕಸ್ತೂರಬಾ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪಾರ್ಕಿಂಗ್ ನಿಷೇಧ ಜಾರಿಗೊಳಿಸಲಾಗಿದೆ.
ಕೆಲವು ರಸ್ತೆಗಳಲ್ಲಿ ಬಿಎಂಟಿಸಿ ಬಸ್‌ಗಳನ್ನು(BMTC buses) ಹೊರತುಪಡಿಸಿ ಇತರ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ
ಎಂದು ಟ್ರಾಫಿಕ್ ಪೊಲೀಸರು(Traffic police) ಮಾಹಿತಿ ನೀಡಿದ್ದಾರೆ.
ವಾಹನ ನಿಲುಗಡೆಗೆ ಪರ್ಯಾಯ (alternative) ವ್ಯವಸ್ಥೆಗಳನ್ನೂ ಮಾಡಲಾಗಿದೆ.(Tight security around Chinnaswamy Stadium for IPL 2026)
ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸೇಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ,
ಫ್ರೀಡಂ ಪಾರ್ಕ್, ಗರುಡ ಮಾಲ್ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್ ನಿಲ್ದಾಣದ ಮೇಲ್ಭಾಗ ಹಾಗೂ ಯು.ಬಿ. ಸಿಟಿ(U.B. City) ಬಳಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಸಾರ್ವಜನಿಕರು ತಮ್ಮ ವಾಹನಗಳನ್ನು ಈ ಸ್ಥಳಗಳಲ್ಲಿ ನಿಲುಗಡೆ ಮಾಡಿ ಅಲ್ಲಿಂದ ಕಾಲ್ನಡಿಗೆಯಲ್ಲೇ ಅಥವಾ ಸಾರ್ವಜನಿಕ ಸಾರಿಗೆ ಮೂಲಕ ಸ್ಟೇಡಿಯಂಗೆ ತೆರಳುವಂತೆ ಸೂಚಿಸಲಾಗಿದೆ.
ಸ್ಟೇಡಿಯಂ ಪ್ರವೇಶ ಮತ್ತು ನಿರ್ಗಮನಕ್ಕೂ ಪ್ರತ್ಯೇಕ ಗೇಟ್‌ಗಳನ್ನು ನಿಗದಿಪಡಿಸಲಾಗಿದೆ. ((Tight security around Chinnaswamy Stadium for IPL 2026))
ಕಬ್ಬನ್ ರಸ್ತೆ,(Cubbon Road) ಲಿಂಕ್ ರಸ್ತೆ ಮತ್ತು ಕ್ವೀನ್ಸ್ ರಸ್ತೆ ಭಾಗದ ವಿವಿಧ ಗೇಟ್‌ಗಳ ಮೂಲಕ ಸಾರ್ವಜನಿಕರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.
ಕೆಲವು ಗೇಟ್‌ಗಳನ್ನು ನಿರ್ಗಮನಕ್ಕಾಗಿ ಮಾತ್ರ ಮೀಸಲಿಡಲಾಗಿದೆ. ವಿಐಪಿ, ಆಟಗಾರರು ಹಾಗೂ ಅಧಿಕಾರಿಗಳಿಗೆ ಪ್ರತ್ಯೇಕ ಪ್ರವೇಶ ವ್ಯವಸ್ಥೆ ಮಾಡಲಾಗಿದೆ.
ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಒಟ್ಟಿನಲ್ಲಿ, ಐಪಿಎಲ್ ಉದ್ಘಾಟನಾ ಪಂದ್ಯ(IPL opening match) ಯಶಸ್ವಿಯಾಗಿ ಹಾಗೂ ಸುರಕ್ಷಿತವಾಗಿ ನಡೆಯಲು ನಗರದೆಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ :https://vijayatimes.com/parents-outrage-against-schools-59-school-bus-drivers-caught-in-drink-and-drive/