Visit Channel

ಉತ್ತರಖಾಂಡ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತೀರ್ಥಸಿಂಗ್ ಯಾದವ್

UTTARAKHAND-CM-TIRTH-SINGH-RAWAT

ಡೆಹ್ರಾಡೂನ್, ಮಾ. 10: ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ಇಂದು ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಥಸಿಂಗ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿತ್ತು.

56ರ ಪ್ರಾಯದ ಇವರು ಪೌರಿ ಚುನಾವಣಾ ಕ್ಷೇತ್ರದ ಸಂಸದರಾಗಿದ್ದಾರೆ. 2012 ರಿಂದ 2017ರ ವರೆಗೆ ರಾವತ್ ಅವರು ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಿದ್ದರು. ಇವರು ಉತ್ತರಪ್ರದೇಶದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು. ಉತ್ತರಾಖಂಡ ರಚನೆಯಾದಾಗ ಮೊದಲ ಶಿಕ್ಷಣ ಸಚಿವರಾಗಿದ್ದವರು ತಿರತ್ ಸಿಂಗ್. 2007ರಲ್ಲಿ ಉತ್ತರಾಖಂಡದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಇದಾದನಂತರ ರಾಜ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಶಾಸಕರಾಗಿ ಆಯ್ಕೆಯಾದ ಇವರು 2013ರಲ್ಲಿ ಉತ್ತರಾಖಂಡ ಬಿಜೆಪಿ ಅಧ್ಯಕ್ಷರಾದರು.

ಉತ್ತರಾಖಂಡ ಸಚಿವ ಧನ್ ಸಿಂಗ್ ರಾವತ್, ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಬಿಜೆಪಿ ಗಡ್​​ವಾಲ್​​ನ ಸಂಸದ ತಿರತ್ ಸಿಂಗ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಗವರ್ನರ್ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ನೀಡಿದ್ದರು. ತಮ್ಮದೇ ಪಕ್ಷದ ಶಾಸಕರಿಂದ ತ್ರಿವೇಂದ್ರ ಸಿಂಗ್ ‘ಅಸಮರ್ಥ ಮುಖ್ಯಮಂತ್ರಿ’ (below average) ಎನಿಸಿಕೊಂಡಿದ್ದರು. ರಾವತ್ ನಾಯಕತ್ವ ಮುಂದುವರಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಬಹುತೇಕ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ರಾವತ್ ವಿಫಲರಾಗಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು.

ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರತ್ ಸಿಂಗ್ ರಾವತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.