ತಿರುಪತಿ ಸರ್ಕಾರಿ ಆಸ್ಪತ್ರೆ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಆಂಧ್ರಪ್ರದೇಶ, ಮೇ. 11: ತಿರುಪತಿ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಸೋಂಕಿತರ ಕುಟುಂಬದವರಿಗೆ ಪರಿಹಾರ ಘೋಷಿಸಲಾಗಿದೆ.

ಆಮ್ಲಜನಕ ಪೂರೈಕೆಯಲ್ಲಿ ವಿಳಂಬ ಆದ್ದರಿಂದ ತೀವ್ರ ನಿಗಾ ಘಟಕದಲ್ಲಿದ್ದವರಲ್ಲಿ 11 ಮಂದಿ ಸೋಂಕಿತರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಜಗನ್‌ ಮೋಹನ್‌ ರೆಡ್ಡಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ವಿಳಂಬವಾದ್ದರಿಂದ ತುರ್ತು ನಿಗಾದಲ್ಲಿದ್ದ 11 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದರು. ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದವರನ್ನು ಉಳಿಸಿಕೊಳ್ಳಲು ವೈದ್ಯಕೀಯ ಸಿಬ್ಬಂದಿ ಹರಸಾಹಸಪಟ್ಟರು ಪ್ರಯೋಜನ ಆಗಲಿಲ್ಲ. ಹೀಗಾಗಿ ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ‌ ಮೃತರ ಕುಟುಂಬ ಸದಸ್ಯರು, ಆಮ್ಲಜನಕ ಪೂರೈಕೆಯಲ್ಲಿ 25-45 ನಿಮಿಷದಷ್ಟು ತಡವಾಗಿದೆ ಎಂದು ಕೋವಿಡ್‌ ಸೋಂಕಿತರ ಕುಟುಂಬಸ್ಥರು ಆರೋಪಿಸಿದ್ದರು.

Exit mobile version