ಟೋಕಿಯೋ: ಟೋಕಿಯೋ ಒಲಂಪಿಕ್ಸ್ ನಲ್ಲಿ ಗುರುವಾರ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಪುರುಷರ ಹಾಕಿ, ಬ್ಯಾಡ್ಮಿಂಟನ್ ಹಾಗೂ ಆರ್ಚರಿ ಕ್ರೀಡೆಯಲ್ಲಿ ಭಾರತೀಯ ಆಟಗಾರರು ಗೆಲುವಿನ ಯಶಸ್ಸು ಸಾಧಿಸಿದ ಬೆನ್ನಲ್ಲೇ ಭಾರತದ ಬಾಕ್ಸರ್ ಸತೀಶ್ ಕುಮಾರ್, ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ.
ಗುರುವಾರ ನಡೆದ ಪುರುಷರ ಸೂಪರ್ ಹೆವಿವೇಟ್ (91+ ಕೆ.ಜಿ.) ವಿಭಾಗದಲ್ಲಿ ಸತೀಶ್, ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4-1ರ ಅಂತರದ ಗೆಲುವು ದಾಖಲಿಸಿದ್ದಾರೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ಗೆ ಸತೀಶ್ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.