ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ

ಟೋಕಿಯೋ, ಜು. 04: ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಪದಕದ ಭೇಟೆ ಮುಂದುವರಿದಿದ್ದು, ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕಕ್ಕೆ ಕೊರಳೊಡಿದ್ದಾರೆ.

ಮಹಿಳಾ ಬಾಕ್ಸಿಂಗ್​ನ 69 ಕೆಜಿ ವಿಭಾಗದ ಭಾರತದಲ್ಲಿ ಫೈನಲ್ ಪ್ರವೇಶ ಪಡೆಯುವಲ್ಲಿ ವಿಫಲರಾಗಿದ್ದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಬುಧವಾರ ನಡೆದ‌ ಸೆಮಿ ಫೈನಲ್​ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಲವ್ಲಿನಾ, ತಮ್ಮ ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಕಷ್ಟು ಪ್ರಯತ್ನಿಸಿದರೂ ನಿರೀಕ್ಷಿತ ಸಾಧನೆ ಸಾಧ್ಯವಾಗಿರಲಿಲ್ಲ . ಕೊನೆಗೆ ಬುಸೆನಾಜ್ ಅವರ ಆಕ್ರಮಣಕಾರಿ ಆಟಕ್ಕೆ ಸೋಲು ಅನುಭವಿಸಿದರು. ಆಗಲೇ ಸೆಮಿಫೈನಲ್​ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು.

ಆದರೆ ಅಂತಿಮ ನಾಲ್ಕರ ಘಟ್ಟದಲ್ಲಿ ಎಡವಿದ್ದಾರೆ.
ಲವ್ಲಿನಾ ಬೊರ್ಗೊಹೈನ್ ಸೋತರೂ ವಿಶೇಷ ಸಾಧನೆ ಮಾಡಿದ್ದಾರೆ. ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆಲುವಿನ ಸನಿಹಕ್ಕೇರಿದ ಮೊದಲ ಭಾರತೀಯರೆನಿಸಲಿದ್ದಾರೆ. ಇದರೊಂದಿಗೆ ಭಾರತಕ್ಕೆ ಪದಕ ತಂದುಕೊಟ್ಟ ಮೂರನೇ ಮಹಿಳಾ ಆಟಗಾರ್ತಿ ಎನಿಸಿದ್ದಾರೆ.

Exit mobile version