ಟೋಕಿಯೋ, ಆ. 07: ಕೋಟ್ಯಾಂತರ ಭಾರತೀಯರ ಪ್ರಾರ್ಥನೆಯಂತೆ ಒಲಂಪಿಕ್ಸ್ ಟೂರ್ನಿಯಲ್ಲಿ ಭಾರತದ ಚಿನ್ನದ ಪದಕದ ಕನಸು ಕಡೆಗೂ ನನಸಾಗಿದ್ದು, ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ, ಒಲಿಂಪಿಕ್ಸ್ನಲ್ಲಿ ಇತಿಹಾಸ ಬರೆದಿದ್ದಾರೆ.
ಶನಿವಾರ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯ ಪುರುಷರ ವಿಭಾಗದ ಫೈನಲ್ ನಲ್ಲಿ 87.58 ಮೀಟರ್ ಎಸೆಯುವ ಮೂಲಕ ಈ ಸಾಧನೆ ಮಾಡಿದ ನೀರಜ್ ಚೋಪ್ರಾ, ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಲ್ಲದೇ 100 ವರ್ಷದ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಮೊದಲ ಚಿನ್ನ ಗೆದ್ದ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಜಾವೆಲಿನ್ ಥ್ರೋನಲ್ಲಿ ಇತಿಹಾಸ ಸೃಷ್ಟಿಸಿದ 23 ವರ್ಷದ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೋಟ್ಯಾಂತರ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.