ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಗೆಲುವಿನ ಓಟವನ್ನು ಮುಂದುವರಿಸಿರುವ
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ಮಹಿಳೆಯರ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಮಹಿಳೆಯರ ಸಿಂಗಲ್ಸ್ ವಿಭಾಗದ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಹಾಲಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ, ಡೆನ್ಮಾರ್ಕ್’ನ ಬ್ಲೆಚ್‌ಫೆಲ್ಡ್ 21-15, 21-13 ನೇರ ಸೆಟ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದರು.
ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟವಾಡಿದ ಸಿಂಧೂ ಮೊದಲ ಸೆಟ್ ನಲ್ಲಿ 21-15ರ ಮುನ್ನಡೆ ಸಾಧಿಸಿದರೆ. 2ನೇ ಸೆಟ್ ನಲ್ಲಿ 21-13 ಅಂತರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವು ತಮ್ಮದಾಗಿಸಿಕೊಂಡರು. ಸದ್ಯ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಸಿಂಧೂ, ಮುಂದಿನ ಪಂದ್ಯದಲ್ಲಿ ಜಪಾನ್ ಆಟಗಾರ್ತಿ ಅಕ್ನೆ ಯಮಗುಚಿ ಅಥವಾ ದಕ್ಷಿಣ ಕೊರಿಯಾದ ಕಿಮ್ ಗಯುನ್ ಅವರನ್ನು ಎದುರಿಸಲಿದ್ದಾರೆ.