• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟೋಲ್ ದರ ಶೇ.5 ಏರಿಕೆ: ಕರ್ನಾಟಕದ 9 ಪ್ರಮುಖ ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಹೆಚ್ಚುವರಿ ಶುಲ್ಕ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಟೋಲ್ ದರ ಶೇ.5 ಏರಿಕೆ: ಕರ್ನಾಟಕದ 9 ಪ್ರಮುಖ ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಹೆಚ್ಚುವರಿ ಶುಲ್ಕ
0
SHARES
4
VIEWS
Share on FacebookShare on Twitter

ಏಪ್ರಿಲ್ 1 ರಿಂದ ಟೋಲ್ ದರ ಏರಿಕೆ: ವಾಹನ ಸವಾರರಿಗೆ (Toll rates increase from April) ಹೆಚ್ಚುವರಿ ಹೊರೆ

ಕಾರು, ಬಸ್, ಲಾರಿಗಳಿಗೆ ಏಪ್ರಿಲ್ 1ರಿಂದ ಹೊಸ ಟೋಲ್ ದರ ಅನ್ವಯ

ರಸ್ತೆ ನಿರ್ವಹಣೆ ಹೆಸರಿನಲ್ಲಿ ಪ್ರತಿವರ್ಷ ದರ ಹೆಚ್ಚಳಕ್ಕೆ ವಿರೋಧ

Bengaluru: ಹೊಸ ಹಣಕಾಸು ವರ್ಷದ ಆರಂಭದ ಜೊತೆಗೆ ರಾಜ್ಯದ (Toll rates increase from April) ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಟೋಲ್ ದರವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲೂ ಈ ಹೊಸ ದರ ಅನ್ವಯವಾಗಲಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವ ಈ ಹೊಸ ದರದಿಂದ ಕಾರು, ಬಸ್ ಹಾಗೂ ಲಾರಿ ಸೇರಿದಂತೆ ಅನೇಕ ವಾಹನಗಳ ಸಂಚಾರ ವೆಚ್ಚ ಹೆಚ್ಚಾಗಲಿದೆ.

Toll rates increase from April

ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಾಹನಗಳಿಗೆ ಈ ಟೋಲ್ (Toll) ದರ ಏರಿಕೆಯ ಪರಿಣಾಮ ತಟ್ಟಲಿದೆ.

ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಮಾಡುವ ವಾಹನ (Toll rates increase from April) ಸವಾರರು ಈಗ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿದೆ.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ (Express Way) , ಬೆಂಗಳೂರು–ತುಮಕೂರು, ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಹಾಸನ ಸೇರಿದಂತೆ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಶೇಕಡಾ 4 ರಿಂದ 5 ರಷ್ಟು ಹೆಚ್ಚಿಸಲಾಗುತ್ತಿದೆ.

ಈ ದರ ಏರಿಕೆಯು ಪ್ರತಿದಿನ ಪ್ರಯಾಣ ಮಾಡುವ ವಾಹನ ಸವಾರರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಉಂಟುಮಾಡಲಿದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ಟೋಲ್ ವಾರ್ಷಿಕ ಪಾಸ್ ದರವೂ ಹೆಚ್ಚಳವಾಗಲಿದೆ. ಈಗಾಗಲೇ ವಾರ್ಷಿಕ ಪಾಸ್‌ಗೆ 3,000 ರೂ. ಪಾವತಿಸುತ್ತಿದ್ದವರು ಇನ್ನುಮುಂದೆ 3,075 ರೂ. ಪಾವತಿಸಬೇಕಾಗುತ್ತದೆ. ಪ್ರತಿವರ್ಷ ನಿರ್ವಹಣೆ ಮತ್ತು ರಸ್ತೆ ಅಭಿವೃದ್ಧಿಯ ಹೆಸರಿನಲ್ಲಿ ಟೋಲ್ ದರ ಹೆಚ್ಚಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಈ ನಿರಂತರ ದರ ಏರಿಕೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಟೋಲ್ ದರ ಹೆಚ್ಚಳವಾಗಲಿರುವ ಪ್ರಮುಖ ಹೆದ್ದಾರಿಗಳಲ್ಲಿ

  • ರಾಷ್ಟ್ರೀಯ ಹೆದ್ದಾರಿ 48(ಬೆಂಗಳೂರು–ತುಮಕೂರು–ಹಾವೇರಿ–ಬೆಳಗಾವಿ–ಮುಂಬೈ)
  • ರಾಷ್ಟ್ರೀಯ ಹೆದ್ದಾರಿ 275 (ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ)
  • ರಾಷ್ಟ್ರೀಯ ಹೆದ್ದಾರಿ 44 (ಬೆಂಗಳೂರು–ಹೈದರಾಬಾದ್)
  • ರಾಷ್ಟ್ರೀಯ ಹೆದ್ದಾರಿ 75 (ಬೆಂಗಳೂರು–ಹಾಸನ–ಮಂಗಳೂರು)
  • ಬೆಂಗಳೂರು–ಹೊಸಕೋಟೆ–ಕೋಲಾರ ಮಾರ್ಗ, ಮಂಗಳೂರು–ಉಡುಪಿ–ಕುಂದಾಪುರ ಮಾರ್ಗ ಸೇರಿದಂತೆ ಇನ್ನೂ ಹಲವು ಪ್ರಮುಖ ಹೆದ್ದಾರಿಗಳು ಸೇರಿವೆ. ಈ ಮಾರ್ಗಗಳಲ್ಲಿ ಸಂಚಾರ ಮಾಡುವವರು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ.

ಪ್ರತಿ ವರ್ಷ ಟೋಲ್ ದರವನ್ನು ಹೆಚ್ಚಿಸುತ್ತಿರುವುದಕ್ಕೆ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಳ ಮತ್ತು ಆದಾಯ ಹೆಚ್ಚಳ ಕಡಿಮೆ ಇರುವ ಸಂದರ್ಭದಲ್ಲಿ ಟೋಲ್ ದರ ಮಾತ್ರ ನಿರಂತರವಾಗಿ ಹೆಚ್ಚುತ್ತಿರುವುದು ಸಾಮಾನ್ಯ ಜನರಿಗೆ ಸಂಕಷ್ಟ ಉಂಟುಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ದರ ಏರಿಕೆ ನಡುವೆ ಟೋಲ್ ದರ ಹೆಚ್ಚಳ ಮತ್ತೊಂದು ಹೊರೆ ಆಗಿದ್ದು, ಸರ್ಕಾರ ಈ ಬಗ್ಗೆ ಮರುಪರಿಶೀಲನೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿ : https://vijayatimes.com/iran-warning-to-us/

Tags: bengaluruincreasesMetroTOLL PRICE

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.