• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಾಳೆಯಿಂದ ‘ಎದೆ ತುಂಬಿ ಹಾಡುವೆನು’

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ನಾಳೆಯಿಂದ ‘ಎದೆ ತುಂಬಿ ಹಾಡುವೆನು’
0
SHARES
0
VIEWS
Share on FacebookShare on Twitter

ಗಾನ ಗಾರುಡಿಗ ದಿ.|ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆಸಿಕೊಡುತ್ತಿದ್ದ ಜನಪ್ರಿಯ ಕಾರ್ಯಕ್ರಮ ‘ಎದೆ ತುಂಬಿ ಹಾಡುವೆನು’ ನಾಳೆ ಶನಿವಾರದಿಂದ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಹೊಸ ರೂಪದೊಂದಿಗೆ ಪ್ರಸಾರವಾಗಲಿದೆ.

ಎಸ್ ಪಿ ಬಿ ಅವರ ನೆನಪಿನಲ್ಲಿ ಆರಂಭವಾಗಲಿರುವ ಈ ಕಾರ್ಯಕ್ರಮದ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಲರ್ಸ್ ಕನ್ನಡದ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್, “ನಾನು ಮೂರುವರ್ಷಗಳ ಹಿಂದೆ ಚೆನ್ನೈ ನಲ್ಲಿ ಎಸ್ ಪಿ ಬಿ ಅವರನ್ನು ಭೇಟಿ ಮಾಡಿ, ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಪುನಃ ಆರಂಭಿಸೋಣ ಎಂದು ಕೇಳಿದ್ದೆ. ಆಗ ಅವರು ನನ್ನ ಶೆಡ್ಯುಲ್ ನೋಡಿ ತಿಳಿಸುತ್ತೀನಿ ಅಂದರು. ಆನಂತರ ಅವರಿಂದ ನನಗೊಂದು ಕಾಗದ ಬಂತು. ನನ್ನ ಬೇರೆ ಕಾರ್ಯಕ್ರಮಗಳು ಈಗಾಗಲೇ ನಿಗದಿಯಾಗಿರುವುದರಿಂದ 2019ರಲ್ಲಿ “ಎದೆ ತುಂಬಿ ಹಾಡುವೆನು” ಕಾರ್ಯಕ್ರಮ ಆರಂಭಿಸೋಣ ಅಂತ ಬರೆದಿದ್ದರು.

ನಂತರ ಕಾರ್ಯಕ್ರಮದ ರೂಪುರೇಷೆ ಸಿದ್ದಗೊಂಡು, ಆರಂಭ ಮಾಡೋಣ ಅಂದುಕೊಳ್ಳುತ್ತದಾಗ “ಕೊರೋನ” ಆರಂಭವಾಯಿತು. ನಂತರದ ದಿನಗಳಲ್ಲಿ ಎಸ್ ಪಿ ಬಿ ನಮ್ಮಿಂದ ದೂರವಾದರು.
ಈಗ ಅವರ ನೆನಪಲ್ಲಿ ಈ ಕಾರ್ಯಕ್ರಮ ಇದೇ ಆಗಸ್ಟ್ 14ರಿಂದ ಆರಂಭವಾಗಲಿದೆ. ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರು. ವಿಶೇಷ ತೀರ್ಪುಗಾರರಾಗಿ ಎಸ್ ಪಿ ಬಿ ಅವರ ಪುತ್ರ ಎಸ್ ಪಿ ಚರಣ್ ಇರುತ್ತಾರೆ. ಈಗಾಗಲೇ ಆಡಿಷನ್ ಮೂಲಕ ಹದಿನಾರರಿಂದ, ಹದಿನೆಂಟು ಗಾಯಕರನ್ನು ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ನಾನು ಚಿಕ್ಕವನಾಗಿದಾಗ ನಮ್ಮಮ್ಮ ರೆಡಿಯೋ ಹಾಕಿದ ತಕ್ಷಣ ಎಸ್ ಪಿ ಬಿ ಅವರ ಹಾಡು ಬರುತಿತ್ತು. ಆಗಿನಿಂದ ಅವರ ಕಂಠಕ್ಕೆ ಅಭಿಮಾನಿ ನಾನು. ಅಂತಹ ಮಹಾನ್ ಗಾಯಕ ನಡೆಸುಕೊಡುತ್ತಿದ್ದ ಕಾರ್ಯಕ್ರಮಕ್ಕೆ ನೀವು ತೀರ್ಪುಗಾರರಾಗಬೇಕು ಎಂದು ಪರಮೇಶ್ವರ್ ಅವರು ಹೇಳಿದಾಗ ನನ್ನ ಆನಂದಕ್ಕೆ ಪಾರವೇ ಇರಲಿಲ್ಲ ಎಂದರು ರಘು ದೀಕ್ಷಿತ್.

ಎಸ್ ಪಿ ಬಿ ಅವರ ಮಾನಸ ಪುತ್ರರೆಂದೇ ಖ್ಯಾತರಾಗಿರುವ ರಾಜೇಶ್ ಕೃಷ್ಣನ್ ಮಾತನಾಡಿ, ಈ ಕಾರ್ಯಕ್ರಮವನ್ನು ಎಸ್ ಪಿ ಬಿ ಅವರೆ ನಮ್ಮಲ್ಲಿ ನಿಂತು ನಡೆಸಿಕೊಡುತ್ತಾರೆ. ಅವರಿಂದ ನಾವು ತಿಳಿದುಕೊಂಡದ್ದನ್ನು, ಈಗಿನ ಗಾಯಕರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ನಾನು ಹಂಸಲೇಖ ಅವರ ಬಳಿ ಟ್ರ್ಯಾಕ್ ಹಾಡುವ ಕಾಲದಲ್ಲಿ ನಾನು ಎಸ್ ಪಿ ಬಿ ಅವರು ಇಲ್ಲಿಗೆ ಬಂದಾಗ ತುಂಬಾ ಹತ್ತಿರದಿಂದ ನೋಡಿದವನು ನಾನು ಅವರು ನೀನು ಏಕೆ ನನ್ನ ಹಾಗೆ ಹಾಡುತ್ತೀಯಾ? ಎಂದು ಕೇಳಿದ್ದು ಉಂಟು..‌ಅವರು ನನ್ನ ಮೇಲಿಟ್ಟಿದ ಪ್ರೀತಿ ಅಪಾರ. ಹೀಗೆ ಎಸ್ ಪಿ ಬಿ ಅವರೊಂದಿಗಿನ ಒಡನಾಟವನ್ನು ರಾಜೇಶ್ ಕೃಷ್ಣನ್ ನೆನಪಿಸಿಕೊಂಡರು.

ಕೆಲವು ವರ್ಷಗಳ ಹಿಂದೆ ಭಾನುವಾರ ರಾಮಾಯಣ ಹಾಗೂ ಮಹಾಭಾರತ ಎಂಬ ಎರಡು ಮಹಾನ್ ಧಾರಾವಾಹಿಗಳು ದೂರದರ್ಶನದಲ್ಲಿ ಬರುತ್ತಿದ್ದವು.‌ ಕೋಟ್ಯಾಂತರ ಜನ ಅದನ್ನು ವೀಕ್ಷಿಸುತ್ತಿದ್ದರು. ಆನಂತರ ಅಷ್ಟೇ ಜನಪ್ರಿಯವಾಗಿದ್ದು “ಎದೆ ತುಂಬಿ ಹಾಡುವೆನು” ನಾನು ಈಗ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮದ ವಿಟಿ ನೋಡಿದಾಗ ಭಯವಾಗುತ್ತಿದೆ.

ಅಲ್ಲಿ ಬರುವ ಹೊಸ ಗಾಯಕರಿಗಿಂತ ನಾವು ತಿಳಿದುಕೊಳ್ಳುವುದು ಸಾಕಷ್ಟಿದೆ. ತೀರ್ಪುಗಾರರಾಗಿ ಎಸ್ ಪಿ ಬಿ ಅವರು ಕಾರ್ಯಕ್ರಮ ನಡೆಸಿಕೊಡುತ್ತಿದ್ದ ರೀತಿ ಅನುಕರಣೀಯ. ಅವರ ಹೆಸರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಡೆಸಿಕೊಡುವುದು ನಮ್ಮ ಕರ್ತವ್ಯ ಎಂದರು ವಿ.ಹರಿಕೃಷ್ಣ.

ಅಪ್ಪನ ನೇತೃತ್ವದಲ್ಲಿ ಮೂಡಿಬರುತ್ತಿದ್ದ, ” ಎದೆ ತುಂಬಿ ಹಾಡುವೆನು” ಕಾರ್ಯಕ್ರಮವನ್ನು ಮತ್ತೆ ಆರಂಭಿಸುತ್ತಿರುವುದಕ್ಕೆ. ಕಲರ್ಸ್ ವಾಹಿನಿಗೆ ಧನ್ಯವಾದ ಎಂದರು ಎಸ್ ಪಿ ಬಿ ಪುತ್ರ ಎಸ್ ಪಿ ಚರಣ್.
ರಾಮೋಜಿರಾವ್ ಅವರು ತೆಲುಗಿನಲ್ಲಿ “ಪಾಡುತ ತೀಯಗ” ಎಂಬ ಕಾರ್ಯಕ್ರಮ ನಡೆಸುತ್ತಿದ್ದರು. ಆ‌ನಂತರ ಅಪ್ಪ ಈ ಕಾರ್ಯಕ್ರಮವನ್ನು ಕನ್ನಡದಲ್ಲಿ “ಎದೆ ತುಂಬಿ ಹಾಡುವೆನು” ಎಂಬ ಶೀರ್ಷಿಕೆಯಿಂದ ಆರಂಭಿಸಿದರು. ಕಾರ್ಯಕ್ರಮ ಅತ್ಯಂತ ಜನಪ್ರಿಯವೂ ಆಯಿತು. ಈ ಟಿವಿ ಅವರು ಈ ಕಾರ್ಯಕ್ರಮ ನಿಲಿಸಿದಾಗ ಅಪ್ಪನಿಗೆ ಬೇಸರವಾಗಿದ್ದು ಉಂಟು. ತೆಲುಗು, ಕನ್ನಡದಲ್ಲಿ ಜನಪ್ರಿಯವಾಗಿದ್ದ ಈ ಕಾರ್ಯಕ್ರಮವನ್ನು ತಮಿಳಿನಲ್ಲಿ ಮಾಡಲಿಲ್ಲ ಎಂಬ ಕೊರಗು ಅಪ್ಪನಲ್ಲಿತ್ತು ಎಂದರು ಚರಣ್.ನಮ್ಮ ಬಾಲ್ಯದಲ್ಲಿ ಅಪ್ಪನೊಂದಿಗೆ ಹೆಚ್ಚು ಸಮಯ ಕಳೆಯಲಿಲ್ಲ.. ಅಪ್ಪ ಯಾವಗಲೂ ಬ್ಯುಸಿ ಇರುತ್ತಿದ್ದರು.

ನನ್ನ ಕಿರಿಯ ಸಹೋದರನಂತಿರುವ ರಾಜೇಶ್ ಕೃಷ್ಣನ್ ಅಪ್ಪನೊಂದಿಗೆ ಸಾಕಷ್ಟು ಸಮಯ ಕಳೆದಿದ್ದಾರೆ ಎಂದು ಚರಣ್ ಹಿಂದಿನ ದಿನಗಳನ್ನು ಮೆಲಕು ಹಾಕಿ ಕೊಂಡರು. ನಾನು ಆಗಾಗ ಈ ಕಾರ್ಯಕ್ರಮಕ್ಕೆ ಆಗಮಿಸುತ್ತೇನೆ ಎಂದು ತಿಳಿಸಿದ ಎಸ್ ಪಿ ಚರಣ್ ಈ ಕಾರ್ಯಕ್ರಮದ ಇಡೀ ತಂಡಕ್ಕೆ ಮತ್ತೊಮ್ಮೆ ಧನ್ಯವಾದ ತಿಳಿಸಿದರು.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.