Visit Channel

ಇಂದು ವಿಶ್ವ ಪ್ರವಾಸೋದ್ಯಮ ದಿನ, ಇನ್ನಾದರೂ ಪ್ರವಾಸಿಗರಿಗೆ ಸಿಗಲಿ ಕೊರೊನಾದಿಂದ ಮುಕ್ತಿ

1980 ರಿಂದ ಸೆಪ್ಟೆಂಬರ್ 27 ರಂದು ವಿಶ್ವದಲ್ಲಿ ಪ್ರತಿ ವರ್ಷ  ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಹಲವಾರು ಪ್ರವಾಸಿ ಕೇಂದ್ರಗಳು, ಸಂಘಟನೆಗಳು ಮತ್ತು ಸರ್ಕಾರಿ ಏಜನ್ಸಿಗಳು ಈ ದಿನವನ್ನು  ಆಚರಿಸುವಲ್ಲಿ ವಿಶೇಷ ಆಸಕ್ತಿಹೊಂದಿವೆ.

ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಪ್ರವಾಸಿ ತಾಣಗಳನ್ನು ಮುಚ್ಚಿದ್ದರಿಂದ ಭಾರತಕ್ಕೆ ಸಾಕಷ್ಟು ಆರ್ಥಿಕ ನಷ್ಟವಾಗಿದೆ. ಇದೀಗ ಕೋವಿಡ್‌ ನಿಯಮಗಳೊಂದಿಗೆ ಒಂದೊಂದೇ ಪ್ರವಾಸ ತಾಣಗಳನ್ನು ತೆರೆಯಲಾಗಿದೆ. ಪ್ರವಾಸ ಮಾಡುವುದರಿಂದ ನಮ್ಮ ಜೀವನದ ಮೇಲೆ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಅರ್ಥಿಕ ಪರಿಣಾಮವನ್ನು  ಬೀರುತ್ತದೆ. ಪ್ರವಾಸೋದ್ಯಮ ದಿನ ಆಚರಿಸುವ ಮುಖ್ಯ ಉದ್ದೇಶ ಏನೆಂದರೆ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ

ಇಂದು ಪ್ರವಾಸ ಉದ್ಯಮವಾಗಿ ಪ್ರವಾಸೋದ್ಯಮವಾಗಿದೆ, ಕಾರಣ ಅದರಲ್ಲಿನ ಅನೇಕ ಅನುಕೂಲಗಳು. ಇಂದು ಭಾರತದಲ್ಲಿ ಪ್ರವಾಸೋದ್ಯಮವು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ. ಪ್ರವಾಸ ಎಂದರೆ ಅದು ಕೇವಲ ಸುತ್ತಾಟವಲ್ಲ. ಅಲ್ಲಿ ಒಂದು ಕಲಿಕೆ ಇರುತ್ತದೆ. ಕೃಷಿ ಪ್ರವಾಸೋದ್ಯಮ, ಅಡುಗೆ ಪ್ರವಾಸೋದ್ಯಮ, ಸಾಂಸ್ಕೃತಿಕ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಪರಂಪರೆಯ ಪ್ರವಾಸೋದ್ಯಮ, ವೈದ್ಯಕೀಯ ಪ್ರವಾಸೋದ್ಯಮ, ನೌಕಾಯಾನ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವನ್ಯಜೀವಿ ಪ್ರವಾಸೋದ್ಯಮ ಹೀಗೆ ಹಲವು ಬಗೆಯ ಪ್ರವಾಸಗಳಿವೆ. ಪ್ರವಾಸೋದ್ಯಮದಿಂದ ಸಾರಿಗೆ, ಹೊಟೇಲ್ ಉದ್ಯಮಕ್ಕೆ ನೇರ ಲಾಭ ತರುವುದರಿಂದ ಅಲ್ಲಿ ಹೆಚ್ಚು ಉದ್ಯೋಗವಕಾಶಗಳು ಸೃಷ್ಟಿಯಾಗುತ್ತದೆ. ಅಲ್ಲದೇ ದೇಶಕ್ಕೆ ಆರ್ಥಿಕ ಲಾಭವನ್ನು ಉಂಟು ಮಾಡುವು

ಭಾರತಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಭಾರತದ ಸಂಸ್ಕೃತಿಗೆ ಮಾರುಹೋಗಿರುವ ವಿದೇಶಿಗರು ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹಾಗೆಯೇ ಭಾರತೀಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

ಪ್ರವಾಸೋದ್ಯಮವು ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ ಜಿಡಿಪಿಗೆ 6.23% ಹಾಗೂ ಭಾರತದಲ್ಲಿ ಒಟ್ಟು ಉದ್ಯೋಗಕ್ಕೆ 8.78%ರಷ್ಟು ಕೊಡುಗೆ ನೀಡುತ್ತದೆ. ವಾರ್ಷಿಕ 5 ದಶಲಕ್ಷಕ್ಕಿಂತಲೂ ಹೆಚ್ಚು ವಿದೇಶಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದಾರೆ.

ವಿಶ್ವ ಪರ್ಯಟನ ಮತ್ತು ಪ್ರವಾಸೋದ್ಯಮ ಸಮಿತಿ ಯ ಪ್ರಕಾರ, ಪರ್ಯಟನ ವಲಯದಲ್ಲಿ ಅತಿ ಹೆಚ್ಚು ಅಭಿವೃದ್ಧಿಯ ಸಾಮರ್ಥ್ಯ ಹೊಂದಿರುವ ಭಾರತ ಉಪಖಂಡಕ್ಕೆ ಮುಂದಿನ ಹತ್ತು ವರ್ಷಗಳ ವರೆಗೆ ಪ್ರವಾಸೋದ್ಯಮಕ್ಕೆ ಪೂರಕವಾದ ಅಗತ್ಯ ಸಾಮರ್ಥ್ಯವಿದೆ.

ವಿಶ್ವದಲ್ಲೇ ಅತಿ ಜನಪ್ರಿಯ ಪ್ರವಾಸಿ ಕೇಂದ್ರಬಿಂದುವಾಗಿ ಹೊರಹೊಮ್ಮಲಿದೆ. ಭಾರತ ದರಗಳ ಸ್ಫರ್ಧೆಯಲ್ಲಿ ಆರನೆಯ ಸ್ಥಾನ ಹಾಗೂ ಸುರಕ್ಷತೆ ಹಾಗೂ ಭದ್ರತೆಯ ವಿಚಾರದಲ್ಲಿ 39ನೇ ಸ್ಥಾನದಲ್ಲಿದೆ. ಕೊರೊನಾ ಹಿನ್ನಲೆಯಲ್ಲಿ ಪ್ರವಾಸೋದ್ಯಮಕ್ಕೆ ಕೊಂಚ ಹಿನ್ನಡೆಯಾಗಿದ್ದು ಇನ್ನಾದರೂ ಪ್ರವಾಸೋದ್ಯಮಕ್ಕೆ ಮುಕ್ತ ಅವಕಾಶ ಸಿಗಲಿ ಎಂಬುವುದು ಪ್ರವಾಸಿಗರ ಆಶಯವಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.