ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಿದ್ರೆ (Towing service begins in bengaluru ) ವಾಹನ ಟೋಯಿಂಗ್ ಖಚಿತ
ನೋ ಪಾರ್ಕಿಂಗ್ ವಾಹನಗಳಿಗೆ ಕಟ್ಟುನಿಟ್ಟಿನ ಕ್ರಮ: ಪೊಲೀಸ್ ಮತ್ತು ಜಿಬಿಎ ಸಂಯುಕ್ತ ಕಾರ್ಯಾಚರಣೆ
5 ಜಿಬಿಎ ವ್ಯಾಪ್ತಿಗೆ 10 ಟೋಯಿಂಗ್ ವಾಹನಗಳ ನಿಯೋಜನೆ
Bengaluru : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ ಟೋಯಿಂಗ್ ವ್ಯವಸ್ಥೆ (Towing service begins in bengaluru) ಆರಂಭವಾಗಿದ್ದು, ನಗರ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಮತ್ತು ಜಿಬಿಎ (GBA) ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ.
ಈಗಾಗಲೇ ಟೋಯಿಂಗ್ ವ್ಯವಸ್ಥೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಟೋಯಿಂಗ್ ವ್ಯವಸ್ಥೆ ಸ್ಥಗಿತಗೊಂಡಿದ್ದರಿಂದ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು, ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲ್ಲಿಸುವುದು ಹೆಚ್ಚಾಗಿತ್ತು.

ಕೆಲವರು ಹಳೆಯ ವಾಹನಗಳನ್ನು ರಸ್ತೆ ಬದಿಯಲ್ಲೇ ತಿಂಗಳಗಟ್ಟಲೆ ನಿಲ್ಲಿಸುತ್ತಿದ್ದ ಕಾರಣ ನಗರದಲ್ಲಿ ಟ್ರಾಫಿಕ್ (Traffic) ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ
ಎಂಬ ದೂರುಗಳು ಸಾರ್ವಜನಿಕರಿಂದ ಬಂದಿದ್ದವು. ಈ ಹಿನ್ನೆಲೆಯಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಲ ದಿನಗಳ ಹಿಂದೆ ನಗರದಲ್ಲಿ ಟೋಯಿಂಗ್ (Towing) ವ್ಯವಸ್ಥೆಯನ್ನು ಪುನರಾರಂಭಿಸುವ ಬಗ್ಗೆ ಸೂಚನೆ ನೀಡಿದ್ದರು.
ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ ಮತ್ತು ಜಿಬಿಎ ಅಧಿಕಾರಿಗಳು ಸಭೆ (Towing service begins in bengaluru) ನಡೆಸಿ ಕಾರ್ಯಾಚರಣೆ ರೂಪುರೇಷೆ ಸಿದ್ಧಪಡಿಸಿದ್ದಾರೆ.
ಟ್ರಾಫಿಕ್ ಹೆಚ್ಚು ಇರುವ ಪ್ರದೇಶಗಳು, ಪ್ರಮುಖ ವಾಣಿಜ್ಯ ರಸ್ತೆ ಮತ್ತು ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ಮೊದಲಿಗೆ ಟೋಯಿಂಗ್ ಕಾರ್ಯಾಚರಣೆ ನಡೆಯಲಿದೆ.
ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ತಲಾ ಎರಡು ವಾಹನಗಳಂತೆ ಒಟ್ಟು ಹತ್ತು ಟೋಯಿಂಗ್ ವಾಹನಗಳನ್ನು ಸರ್ಕಾರ ಒದಗಿಸಿದೆ.
ಪ್ರತಿ ಟೋಯಿಂಗ್ ವಾಹನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್, ಒಬ್ಬ ಕಾನ್‌ಸ್ಟೇಬಲ್ (Constable) ಹಾಗೂ ಜಿಬಿಎಯಿಂದ ನಾಲ್ಕು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
ಇದರಿಂದ ಕಾರ್ಯಾಚರಣೆ ಹೆಚ್ಚು ನಿಯಂತ್ರಿತ ಮತ್ತು ಪಾರದರ್ಶಕವಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೋಯಿಂಗ್ ವಾಹನಗಳ ಮುಂಭಾಗ ಮತ್ತು ಹಿಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಗಲಾಟೆ ಅಥವಾ ಅವಘಡ ಸಂಭವಿಸಿದರೆ ಅದನ್ನು ದಾಖಲಿಸಲಾಗುತ್ತದೆ. ಸಿಬ್ಬಂದಿಯ ವರ್ತನೆ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ.
ಸಾರ್ವಜನಿಕರು ಟ್ರಾಫಿಕ್ ನಿಯಮಗಳನ್ನು ಪಾಲಿಸಿ, ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲ್ಲಿಸದಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಈ ಕ್ರಮ ಸಹಾಯಕವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : https://vijayatimes.com/impact-of-war-hits-economy/