- ಬೆಂಗಳೂರು-ಮೈಸೂರು (Bangalore-Mysore) ಎಕ್ಸ್ಪ್ರೆಸ್ ಹೈವೇ ನಿರ್ಮಾಣದ ಬಳಿಕ ಟಾಯ್ ಪಾರ್ಕ್ ಗೆ ಮನವಿ
- ನೆಲ ಕಚ್ಚಿರುವ ಚನ್ನಪಟ್ಟಣ ಬೊಂಬೆ (Channapatna Puppet) ಉದ್ಯಮಕ್ಕೆ ಹೊಸ ಹುರುಪು
- ಸಂಸದ ಡಾ. ಸಿ.ಎನ್ ಮಂಜುನಾಥ್ (Dr. C.N. Manjunath) ಅವರ ಮನವಿಗೆ ಸಕಾರಾತ್ಮಕ ಸ್ಪಂದನೆ
Ramnagar: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ನಿರ್ಮಾಣದ ಬಳಿಕ ಚನ್ನಪಟ್ಟಣಕ್ಕೆ(Channapatna) ತೆರಳುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಪ್ರವಾಸಿಗರ ಇಳಿಮುಖದಿಂದ ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ (Industry) ದೊಡ್ಡ ಹೊಡೆತ ಬಿದ್ದಿದೆ. ಈ ಹಿನ್ನೆಲೆ ಎಕ್ಸ್ಪ್ರೆಸ್ ಹೈವೇ (Express Highway) ಕಾರಿಡಾರ್ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಬೆಂಗಳೂರು ಗ್ರಾಮಾಂತರ (Bangalore countryside) ಸಂಸದ ಡಾ.ಸಿ.ಎನ್ ಮಂಜುನಾಥ್ (Dr. C.N. Manjunath) ಮನವಿ ಮಾಡಿದ್ದಾರೆ.ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಡಾ. ಸಿ.ಎನ್ ಮಂಜುನಾಥ್ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

ಈ ವೇಳೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಚನ್ನಪಟ್ಟಣ ಬೊಂಬೆಗಳನ್ನು (Channapatna dolls) ಉತ್ತೇಜಿಸುವ ನಿಟ್ಟಿನಲ್ಲಿ ಟಾಯ್ಸ್ ಪಾರ್ಕ್(Toys Park) ನಿರ್ಮಿಸಿ ಸ್ಥಳೀಯವಾಗಿ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ (Manufacturers and tourists) ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಚನ್ನಪಟ್ಟಣದ ಬೊಂಬೆಗಳಿಗೆ ಐತಿಹಾಸಿಕ ಹಿನ್ನೆಲೆ (Historical background) ಇದೆ. ಚನ್ನಪಟ್ಟಣ ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಈ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ (Industry) .ಹಾಗಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ (Channapatna city) ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ.ಈ ಹಿನ್ನೆಲೆ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ (Express corridor) ಚನ್ನಪಟ್ಟಣ ಸಮೀಪ ಟಾಯ್ಸ್ ಪಾರ್ಕ್ (Toys Park) ನಿರ್ಮಿಸಬೇಕು. ಇದರಿಂದ ಸ್ಥಳೀಯವಾಗಿ ಬೊಂಬೆ ತಯಾರಿಕೆಯ (Doll making) ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ. ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸಿದಂತಾಗುತ್ತದೆ ಎಂದು ಮನವಿ ಮಾಡಿದರು. ಸಂಸದ ಡಾ. ಸಿ.ಎನ್ ಮಂಜುನಾಥ್ ಅವರ ಮನವಿಗೆ ಕೇಂದ್ರ ಸಚಿವರು (Union Minister) ಸಕಾರಾತ್ಮಕವಾಗಿ ಸ್ಪಂದಿಸಿದ್ದು ಆದಷ್ಟು ಬೇಗ ಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದಾರೆ.