ಕಾನ್ಪುರದಲ್ಲಿ ತರಬೇತಿಗೆ (Training plane crash in Kanpur) ಬಳಸುತ್ತಿದ್ದ ವಿಮಾನ ಪತನ
ತರಬೇತಿ ಹಾರಾಟ ಮುಗಿಸಿ ವಾಪಸ್ ಬರುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ವಿಮಾನ
ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು
ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ನಡೆದ ಭೀಕರ (Training plane crash in Kanpur) ವಿಮಾನ ಅಪಘಾತದಲ್ಲಿ ಕರ್ನಾಟಕದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ತರಬೇತಿ ಹಾರಾಟ ನಡೆಸುತ್ತಿದ್ದ ಟ್ವಿನ್ ಎಂಜಿನ್ ಹೊಂದಿರುವ ನಾಲ್ಕು ಆಸನಗಳ ವಿಮಾನ ನಿಯಂತ್ರಣ ಕಳೆದುಕೊಂಡು ಗಂಗಾ ನದಿ ತೀರದ ಸಮೀಪದ ಹೊಲದಲ್ಲಿ
ಪತನಗೊಂಡಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ.

ಕಾನ್ಪುರದ ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ಬೆಳಗ್ಗೆ ಸುಮಾರು 11:30ಕ್ಕೆ ವಿಮಾನ ಟೇಕ್‌ಆಫ್ (Take-Off) ಆಗಿತ್ತು. ತರಬೇತಿ ಹಾರಾಟ ಪೂರ್ಣಗೊಳಿಸಿ
ತರಬೇತಿ ಕೇಂದ್ರದತ್ತ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸುಮಾರು 11:50ರ ವೇಳೆಗೆ ವಿಮಾನ ನಿಯಂತ್ರಣ ಕಳೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವೇ ನಿಮಿಷಗಳಲ್ಲಿ ವಿಮಾನ ನೆಲಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ ಇಬ್ಬರೂ ಗಂಭೀರವಾಗಿ (Training plane crash in Kanpur) ಗಾಯಗೊಂಡು ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳಕ್ಕೆ ತುರ್ತು ಸೇವಾ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ತಕ್ಷಣ ಧಾವಿಸಿ ಪರಿಶೀಲನೆ ನಡೆಸಿದರು.
ವಿಮಾನದಲ್ಲಿದ್ದ ಇಬ್ಬರನ್ನು ಗುಜರಾತ್ ಮೂಲದ ಸಚಿನ್ ಭಾಟಿಯಾ (Sachin Bhatia) ಹಾಗೂ ಕರ್ನಾಟಕದ ಅಭಿಷೇಕ್ ಪೂಜಾರಿ (Abhishek Poojari) ಎಂದು
ಗುರುತಿಸಲಾಗಿದೆ. ಇವರಲ್ಲಿ ಒಬ್ಬರು ತರಬೇತಿ ಪಡೆಯುತ್ತಿದ್ದ ಪೈಲಟ್ (Pilot) ಆಗಿದ್ದರೆ, ಮತ್ತೊಬ್ಬರು ತರಬೇತಿ ನೀಡುತ್ತಿದ್ದ ಇನ್‌ಸ್ಟ್ರಕ್ಟರ್ ಆಗಿದ್ದರು.
ಪೊಲೀಸ್ ಅಧಿಕಾರಿಗಳ ಪ್ರಕಾರ, ಇನ್‌ಸ್ಟ್ರಕ್ಟರ್‌ಗೆ ಸುಮಾರು 3,000 ಗಂಟೆಗಳ ಹಾರಾಟದ ಅನುಭವವಿತ್ತು ಎನ್ನಲಾಗಿದೆ. ವಿಮಾನ ಪತನದ ಪರಿಣಾಮ ಸ್ಥಳದಲ್ಲೇ
ಅದರ ಹಲವು ಭಾಗಗಳು ನಜ್ಜುಗುಜ್ಜಾಗಿದ್ದು, ರೆಕ್ಕೆಗಳು ಹಾಗೂ ಲೋಹದ ಅವಶೇಷಗಳು ಹೊಲದಲ್ಲಿ ಚದುರಿದ ಸ್ಥಿತಿಯಲ್ಲಿ ಕಂಡುಬಂದಿವೆ.
ಅಪಘಾತದ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ಮಾಹಿತಿ ನೀಡಲಾಗಿದೆ. DGCA ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾನ್ಪುರ ಸಿವಿಲ್
ಏರ್‌ಪೋರ್ಟ್‌ನ (Civil Airport) ಸ್ಥಳೀಯ ಹಾರಾಟ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ಈ ವಿಮಾನದಲ್ಲಿ ತರಬೇತಿ ಪೈಲಟ್ ಮತ್ತು ಇನ್‌ಸ್ಟ್ರಕ್ಟರ್ ಇದ್ದರು.
ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಮಂಡಳಿಗೂ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ವಿಮಾನ ಯಾವ
ಕಾರಣಕ್ಕೆ ನಿಯಂತ್ರಣ ಕಳೆದುಕೊಂಡಿತು, ತಾಂತ್ರಿಕ ದೋಷವಿತ್ತೇ ಅಥವಾ ಇತರ ಯಾವುದೇ ಕಾರಣವಿತ್ತೇ ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಲಿದೆ.
ಈ ತರಬೇತಿ ವಿಮಾನವನ್ನು 2023ರಲ್ಲಿ ತರಬೇತಿ ಕೇಂದ್ರಕ್ಕೆ ತರಲಾಗಿತ್ತು ಎನ್ನಲಾಗಿದೆ.
ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಇಬ್ಬರು ಪೈಲಟ್‌ಗಳ ಸಾವಿಗೆ ಕಂಬನಿ ಮಿಡಿದಿರುವ ಅವರು,
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ಈ ಆಘಾತವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಏತನ್ಮಧ್ಯೆ, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ತನಿಖಾ ವರದಿ ಹೊರಬಂದ ಬಳಿಕವೇ ದುರಂತಕ್ಕೆ ಕಾರಣವಾದ ನಿಜವಾದ ಸಂಗತಿಗಳು ಬೆಳಕಿಗೆ ಬರಲಿವೆ.
ಕರ್ನಾಟಕದ ಅಭಿಷೇಕ್ ಪೂಜಾರಿ ಸೇರಿದಂತೆ ಇಬ್ಬರು ಪೈಲಟ್‌ಗಳ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಪರಿಚಯಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : https://vijayatimes.com/gba-warning-to-bengaluru-owner/