ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ 1529 ಹುದ್ದೆ ಭರ್ತಿಗೆ ಕ್ರಮ – ಸಾರಿಗೆ ಸಚಿವ

ಬೆಂಗಳೂರು ಅ 1 : ಸಾರಿಗೆ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳಿಗೆ ಹೋಲಿಸಿದರೆ ಅರ್ಧಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಸಾರಿಗೆ ಇಲಾಖೆಯ ತನಿಖಾ ಠಾಣೆಗಳಲ್ಲಿ ಸಿಬ್ಬಂದಿಯೇ ಇಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಚೆಕ್ ಪೋಸ್ಟ್ ಗಳಲ್ಲಿ ಲಂಚದ ಹಾವಳಿ ಮಿತಿಮೀರಿದೆ. ತುಮಕೂರು ಚೆಕ್ ಪೋಸ್ಟ್ ನಲ್ಲಿ ಲಂಚ ಹಾಕಲು ಡ್ರಮ್ ಇಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ಆರೋಪಿಸಿದ್ದರು. ಇಂತಹ ವ್ಯವಸ್ಥೆಗೆ ಕಡಿವಾಣ ಹಾಕಬೇಕು. ಚೆಕ್ಪೋಸ್ಟ್ ಗಳಲ್ಲಿ ಹಫ್ತಾ ವಸೂಲಿಗೆ ಕಡಿವಾಣ ಹಾಕಬೇಕು. ಖಾಲಿ ಹುದ್ದೆಗಳ ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಚೆಕ್ ಪೋಸ್ಟ್ ಗಳಲ್ಲಿ ನಡೆಯುತ್ತಿರುವ ಕ್ರಮದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ 15 ಚೆಕ್ಪೋಸ್ಟ್ ಗಳಲ್ಲಿ 37 ಹುದ್ದೆಗಳು ಇವೆ. ಇವುಗಳಲ್ಲಿ 29 ಹುದ್ದೆ ಖಾಲಿಯಿದ್ದು, ಸಾರಿಗೆ ಇಲಾಖೆಯ ಪ್ರಮುಖ ಹುದ್ದೆಗಳಲ್ಲಿ 1529 ಹುದ್ದೆ ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಇರುವ ಕಾರಣದಿಂದ ನೇಮಕಾತಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಈಗ ನೇಮಕಾತಿಗೆ ಒಪ್ಪಿಗೆ ನೀಡಲು ಸಿದ್ಧತೆ ನಡೆದಿದೆ. ಸಾರಿಗೆ ಇಲಾಖೆಯಲ್ಲಿ ಖಾಲಿಇರುವ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Exit mobile version