ಸಾರಿಗೆ ನೌಕರರ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್‌ ಪೊಲೀಸರ ವಶಕ್ಕೆ

ಬೆಳಗಾವಿ, ಏ. 10: ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಮುಂದಾಗಿದ್ದ ಕೋಡಿಹಳ್ಳಿ ಚಂದ್ರಶೇರ್‌ರನ್ನು ನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಲ್ಲಿನ ಸುವರ್ಣಸೌಧದ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆ ನಡೆಸಲು ನಿರ್ಧರಿಸಿದ್ದರು. ಸಭೆಗೂ ಮುನ್ನವೇ ಅವರನ್ನು ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ ಪೊಲೀಸರು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದಿದ್ದಾರೆ.

ವೇತನ ಪರಿಷ್ಕರಣೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರವನ್ನು ತೀವ್ರ ಗೊಳಿಸಿದ್ದಾರೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಬೆಳಗಾವಿ, ಗುಲ್ಬರ್ಗದಲ್ಲಿ ಸಾರಿಗೆ ಮುಖಂಡರು ಮತ್ತು ನೌಕರರ ಜೊತೆ ಸಭೆ ನಡೆಸಲು ಮುಂದಾಗಿದ್ದರು.

ಆದರೆ ಮುಂಜಾಗ್ರತೆ ಕ್ರಮವಾಗಿ ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರನ್ನು ವಶಕ್ಕೆ ಪಡೆದಿದ್ದಾರೆ. ಬಂಧನಕ್ಕೆ ಒಳಗಾದ ಬಳಿಕ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ.

Exit mobile version