45 ರ ವರ 25 ರ ವಧು ! ವೈರಲ್ ಆದ ಮದುವೆ

ತುಮಕೂರು ಅ 19 :  ಕಳೆದು ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದ ಪೊಟೋಗೆ ಕೊನೆಗೂ ಸ್ಪಷ್ಟನೆ ಸಿಕ್ಕಿದ್ದು, 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಫೋಟೋಗಳು ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗುವಂತೆ ಕೇಳಿ ಕೊಂಡಿದ್ದಾಳೆ.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ.

Exit mobile version