ತುಮಕೂರು : ರಾಜ್ಯದ ತುಮಕೂರಿನಲ್ಲಿ(Tumkuru) ಬೆಳ್ಳಂಬೆಳಗ್ಗೆ ಲಾರಿ-ಟೆಂಪೋ ಭೀಕರ ರಸ್ತೆ ಅಪಘಾತವಾಗಿದ್ದು(Road Accident), ಸ್ಥಳದಲ್ಲೇ 9 ಜನರ ಸಾವು, 14 ಮಂದಿ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಶಿರಾ(Shira) ತಾಲೂಕಿನ ಕಳ್ಳಂಬೆಳ್ಳ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : https://vijayatimes.com/siddaramaiah-slams-state-bjp-govt/
ತುಮಕೂರಿನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರ್ಯಾಕ್ಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಕ್ರೂಸರ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 14 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಸ್ದಳಕ್ಕೆ ಎಸ್ಪಿ , ಅಡಿಷನಲ್ ಎಸ್ಪಿ ಭೇಟಿ ನೀಡಿದ್ದು ಶಿರಾ ಪೊಲೀಸ್ ಅಧಿಕಾರಿಗಳು ಸ್ದಳದಲ್ಲಿ ಉಪಸ್ಥಿತರಿದ್ದಾರೆ. ದುರುಗಮ್ಮ, ಬಾಲರಾಜು, ಸಂದೀಪ್, ಉಮೇಶ್, ಯಲ್ಲಮ್ಮ, ಅನಿಲ್, ದೇವರಾಜು, ಮೌನಿಕ, ನಾಗಪ್ಪ, ನಾಗಮ್ಮ, ವಸಂತ್, ವೈಷ್ಣವಿ, ವೀರಭದ್ರ, ಲತಾ ಗಾಯಾಳುಗಳು.
ಈ ಘಟನೆ ಮುಂಜಾನೆ ಸುಮಾರು 4 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮೃತರು ರಾಯಚೂರಿನ ದಿನಗೂಲಿ ಕಾರ್ಮಿಕರು ಎಂದು ಹೇಳಲಾಗಿದೆ.
ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಹಾಗೂ ಶಿರಾ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.