Bengaluru : ಸಂತೋಷ್ ಆಟಕ್ಕೆ ಯಡಿಯೂರಪ್ಪ ಬಲಿ! ಪ್ರಹ್ಲಾದ ಜೋಶಿ (Pralhad Joshi) ಆಟಕ್ಕೆ ಜಗದೀಶ್ ಶೆಟ್ಟರ್ (Jagadish Shettar) ಬಲಿ ಎಂದು ರಾಜ್ಯ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ಸರ್ಕಾರವನ್ನು (BJP Govt) ನೇರವಾಗಿ ಆರೋಪಿಸಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಭರ್ಜರಿಯಾಗಿ ಸಿದ್ದವಾಗಿದ್ದು, ಪ್ರತಿಪಕ್ಷಗಳು ತಮ್ಮದೇ ಶೈಲಿಯಲ್ಲಿ ಪೈಪೋಟಿಯನ್ನು ನಡೆಸುವಲ್ಲಿ ಪ್ರಮುಖವಾಗಿದೆ. ಆದ್ರೆ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಮಾತ್ರ ತೀವ್ರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದೆ. ಈ ಮೂಲಕ ಸರಣಿ ಆರೋಪಗಳ ಪೈಪೋಟಿ ನಡೆಸುತ್ತಿದೆ.
ಸದ್ಯ ಕಾಂಗ್ರೆಸ್ (Congress) ಬಿಜೆಪಿ ವಿರುದ್ಧ ಸರಣಿ ಆರೋಪ ಎಸಗಿದ್ದು, ನಾಗಪುರದ ಕರುಳುಬಳ್ಳಿಯ ಸಂಬಂಧವನ್ನೇ ಬಳಸಿ ಬಿಜೆಪಿಯಲ್ಲಿ ಪ್ರಾಭಲ್ಯ ಸಾಧಿಸಿರುವ ಪ್ರಹ್ಲಾದ್ ಜೋಶಿ ಲಿಂಗಾಯತ ನಾಯಕರನ್ನು ಹೊಂಡಕ್ಕೆ ಕೆಡವುದರಲ್ಲಿ ಯಶಸ್ವಿಯಾಗಿದ್ದಾರೆ.
ಮಾಜಿ ಸಿಎಂ ಒಬ್ಬರಿಗೆ ಟಿಕೆಟ್ ನಿರಾಕರಿಸುವಂತಹ ಅವಮಾನ ಇನ್ನೊಂದಿಲ್ಲ.
ಇದನ್ನೂ ಓದಿ : https://vijayatimes.com/puc-results-announcement/
BSY, ಈಶ್ವರಪ್ಪ, ಜಗದೀಶ್ ಶೆಟ್ಟರ್! ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ. “ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ. ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ!
ಕರ್ನಾಟಕದ ಅಸ್ಮಿತೆಗೆ ಕೊಳ್ಳಿ ಇಡಲು ಹವಣಿಸುತ್ತಿರುವ ಬಿಜೆಪಿಯ ನಾಗಪುರದ ನೌಕರರು ಮುಳುಗಿಸಿದ ಹೆಮ್ಮೆಯ ಸಂಸ್ಥೆಗಳು ಒಂದೆರಡಲ್ಲ. ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಕಳೆದುಕೊಂಡ ಕನ್ನಡಿಗರು ನಂದಿನಿಯನ್ನೂ ಕಳೆದುಕೊಳ್ಳಲು ತಯಾರಿಲ್ಲ. ಅಮೂಲ್ ಪರ ವಕಾಲತ್ತು ವಹಿಸುವ ರಾಜ್ಯ ಬಿಜೆಪಿ ನಾಯಕರು ಈ ಹಿಂದಿನ ಅವಾಂತರಗಳ ಬಗ್ಗೆ ಮಾತಾಡುವರೇ?

ಬಿ.ಎಸ್ ಯಡಿಯೂರಪ್ಪ (BS Yediyurappa) – ಔಟ್
ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್
ಕೆ.ಎಸ್ ಈಶ್ವರಪ್ಪ – ಔಟ್
ಜಗದೀಶ್ ಶೆಟ್ಟರ್ – ಔಟ್?
ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ ಜೋಶಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ (Amit Shah) ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ.
ಇದನ್ನೂ ಓದಿ : https://vijayatimes.com/bollywood-actor-shahrukhkhan/
ಮೊ-ಶಾ ಜೋಡಿಯ ಮಸಲತ್ತು ನೋಡಿದರೆ, ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSS ಗೆ ಅಪಥ್ಯವೇ.
ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ. ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ (Eshwarappa) ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ!
ಇದನ್ನೂ ಓದಿ : https://vijayatimes.com/puc-results-announcement/
ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು! ಎಂದು ಸರಣಿ ಆರೋಪಗಳನ್ನು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಮಾಡಿದೆ.