ಬಿಜೆಪಿಯಲ್ಲಿ ಟಿಕೆಟ್ ಗ್ಯಾರಂಟಿ ಇಲ್ಲ,
ಟಿಕೆಟ್ ಸಿಕ್ಕವರಿಗೆ ಗೆಲುವಿನ ಗ್ಯಾರಂಟಿ ಇಲ್ಲ,
ರಾಜ್ಯದಲ್ಲಿ ಬಿಜೆಪಿಗೇ ಗ್ಯಾರಂಟಿ ಇಲ್ಲ! : ರಾಜ್ಯ ಕಾಂಗ್ರೆಸ್

Bengaluru : ರಾಜ್ಯದಲ್ಲಿ ಬಿಜೆಪಿ (BJP) ಪಕ್ಷದ ಕೆಲವು ನಾಯಕರು ಕಾಂಗ್ರೆಸ್ (Congress) ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದರು. ಆದ್ರೆ, ಬಿಜೆಪಿ ನಾಯಕರಿಗೆ ತಮ್ಮ ಪಕ್ಷದಲ್ಲಿಯೇ ಟಿಕೆಟ್ ಗ್ಯಾರಂಟಿ ಇಲ್ಲ, ಟಿಕೆಟ್ ಸಿಕ್ಕವರಿಗೆ ಗೆಲುವಿನ ಗ್ಯಾರಂಟಿ ಇಲ್ಲ, ರಾಜ್ಯದಲ್ಲಿ ಬಿಜೆಪಿಗೇ ಗ್ಯಾರಂಟಿ (Tweets of state Congress) ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ಕುರಿತು ವ್ಯಂಗ್ಯವಾಡಿದೆ.

ಬಿಜೆಪಿ ಕುರಿತು ಸರಣಿ ಟ್ವೀಟ್ (Tweet) ಮಾಡುವ ಮೂಲಕ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ ಕಾಂಗ್ರೆಸ್, ಬಿಜೆಪಿ ಕೊಟ್ಟ ಭರವಸೆಗಳು ಆರುನೂರು, ಈಡೇರಿಸಿದ್ದನ್ನು ಕಂಡವರಾರು!

ಇದು ಬಿಜೆಪಿಯ ಹಿಂದಿನ ಪ್ರಣಾಳಿಕೆಯ ಭರವಸೆಗಳ ಅಸಲಿ ಕತೆ. ಅಭಿವೃದ್ಧಿಪರ ಚಿಂತನೆ ಇಲ್ಲದ ಬಿಜೆಪಿಯಿಂದ ಬೇಸತ್ತಿರುವ ಕರ್ನಾಟಕಕ್ಕೆ ಕೆಲವೇ (Tweets of state Congress) ದಿನಗಳಲ್ಲಿ ಆಶಾದಾಯಕ ದಿನಗಳು ಬರಲಿವೆ.

ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ. ಬಿಜೆಪಿ ವಂಚಕರ ಮಾತಿಗೆ ಮರುಳಾಗದೆ ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳಿದೆ.

ಬಿಜೆಪಿ ಈಗ ಮುಳುಗಿದ ಹಡಗು! ಅಲ್ಲಿ ಮೋದಿ (Narendra modi) -ಅಮಿತ್ ಶಾ (Amit Shah) ಜೋಡಿ,

ಇಲ್ಲಿ ಜೋಶಿ – ಸಂತೋಷ್ ಜೋಡಿ ಪಕ್ಷದಲ್ಲಿ ಸರ್ವಾಧಿಕಾರ ಸ್ಥಾಪಿಸಲು ಮಾಡಿದ ಹುನ್ನಾರಗಳು ಬಿಜೆಪಿಗೇ ಮುಳುವಾಗಲಿದೆ.

ಇದನ್ನೂ ಓದಿ : https://vijayatimes.com/a-woman-filed-a-case-against-a-dog/

ಕೆಡರ್ ಕಾರ್ಯಕರ್ತರು ಎನ್ನುತ್ತಿದ್ದರು, ಈಗ ಬಿಜೆಪಿಗೆ ಕೇಡಿ ಕಾರ್ಯಕರ್ತರಾಗಿದ್ದಾರೆ. ಶಿಸ್ತಿನ ಪಕ್ಷ ಎಂದು ಕೊಳ್ಳುತ್ತಿದ್ದರು, ಈಗ ಕುಸ್ತಿಯ ಪಕ್ಷವಾಗಿದೆ!

ಬಿ.ಎಸ್ ಬಸವರಾಜ ಬೊಮ್ಮಾಯಿ (Basavaraja Bommai) ಅವರೇ, ನಿಮ್ಮ “ಮೀಸಲಾತಿ ಗಿಮಿಕ್” ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಜನತೆಗೆ ಈಗ ನಿಮ್ಮ ಉತ್ತರವೇನು, ಸಾಬೂಬುಗಳೇನು?

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಎತ್ತಿ ಹಿಡಿದಿದೆ.


ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ. ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‌ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ

ತುಪ್ಪ ಸವರುವ ನಿರ್ದಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ರಾಜ್ಯ ಬಿಜೆಪಿ (State BJP) ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ!

“ಅನುಷ್ಠಾನ ಅಸಾಧ್ಯ” ಎಂಬುದು ಸುಪ್ರೀಂ ಹೇಳುವ ಮೂಲಕ ಬಿಜೆಪಿಯ ಕಿವಿ ಮೇಲೆ ಹೂವು ಇಡುವ ಪ್ರಯತ್ನವನ್ನು ಬಯಲುಗೊಳಿಸಿದೆ.

ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಟೀಕಿಸುತ್ತಿದ್ದರು. ಈಗ ಆ ನಾಯಕರಿಗೆ ಟಿಕೆಟ್ ಗ್ಯಾರಂಟಿ ಇಲ್ಲ, ಟಿಕೆಟ್ ಸಿಕ್ಕವರಿಗೆ ಗೆಲುವಿನ ಗ್ಯಾರಂಟಿ ಇಲ್ಲ, ರಾಜ್ಯದಲ್ಲಿ ಬಿಜೆಪಿಗೇ ಗ್ಯಾರಂಟಿ ಇಲ್ಲ!

ನಾವು ಅಧಿಕಾರಕ್ಕೆ ಬರುವುದೂ ಗ್ಯಾರಂಟಿ, ನಮ್ಮ ಭರವಸೆಗಳನ್ನೂ ಈಡೇರಿಸುವುದೂ ಗ್ಯಾರಂಟಿ, ಪ್ರಗತಿ ತರುವುದೂ ಗ್ಯಾರಂಟಿ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

Exit mobile version