Visit Channel

ಟ್ವಿಟರ್ ಇಂಡಿಯಾದ ಮುಖ್ಯಸ್ಥ ಮನೀಶ್ ಮಹೇಶ್ವರಿಗೆ ಅಮೆರಿಕದಲ್ಲಿ ಉನ್ನತ ಹುದ್ದೆ

manish1628866977

ಅಮೆರಿಕಾ, ಆ. 14: ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮನೀಶ್‌ ಮಹೇಶ್ವರಿಗೆ ಅಮೆರಿಕದಲ್ಲಿ ಉನ್ನತ ಹುದ್ದೆಯ ಜವಾಬ್ದಾರಿಯನ್ನು ಟ್ವಿಟರ್ ನೀಡಿದೆ.

ಟ್ವಿಟರ್‌ನ ಜಪಾನ್, ದಕ್ಷಿಣ ಕೊರಿಯಾ ಮತ್ತು ಏಷ್ಯಾ ಪೆಸಿಫಿಕ್ ವಿಭಾಗದ ಉಪಾಧ್ಯಕ್ಷ ಯು ಸಸಮೊಟೊ ಮನೀಶ್ ಈ ವಿಚಾರವಾಗಿ ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

‘ಕಳೆದ 2+ ವರ್ಷಗಳಲ್ಲಿ ಟ್ವಿಟರ್‌ ಇಂಡಿಯಾದ ನಾಯಕತ್ವ ವಹಿಸಿಕೊಂಡಿದ್ದಕ್ಕಾಗಿ ಮನೀಶ್‌ ಅವರಿಗೆ ಧನ್ಯವಾದಗಳು. ಜಗತ್ತಿನಾದ್ಯಂತ ಹೊಸ ಮಾರುಕಟ್ಟೆಗಳಿಗೆ ಆದಾಯ ತಂತ್ರಗಳನ್ನು ರೂಪಿಸುವ ಮತ್ತು ಕಾರ್ಯಾಚರಣೆಗಳನ್ನು ನಡೆಸುವ ಜವಾಬ್ದಾರಿ ನಿಮಗೆ ಸಿಕ್ಕಿದೆ. ಅಮೆರಿಕದಲ್ಲಿ ನೀವು ಹೊಸ ಹುದ್ದೆ ವಹಿಸಿಕೊಳ್ಳುತ್ತಿರುವುದಕ್ಕೆ ಅಭಿನಂದನೆಗಳು. ಈ ಪ್ರಮುಖ ಹುದ್ದೆಯನ್ನು ನೀವು ಮುನ್ನಡೆಸಲಿದ್ದೀರಿ. ಅದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ’ ಎಂದು ಸಸಮೊಟೊ ಟ್ವೀಟ್ ಮಾಡಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.