ನವದೆಹಲಿ ನ 10 : ಟ್ವಿಟರ್‌ನಲ್ಲಿ ಜಗತ್ತಿನ 50 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅಮೆರಿಕದ ಗಾಯಕಿ ಟೇಲರ್ ಸ್ವಿಫ್ಟ್ ಮೊದಲ ಸ್ಥಾನ ಪಡೆದಿದ್ದಾರೆ.
ಕಸ್ಟಮರ್ ಇಂಟೆಲಿಜೆನ್ಸ್ ಬ್ರಾಂಡ್ ವಾಚ್ ನಡೆಸಿದ ವಾರ್ಷಿಕ ಸಮೀಕ್ಷೆಯ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ, ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಎರಡನೇ ಅತ್ಯಂತ ಪ್ರಭಾವಶಾಲಿ ವ್ಯಕ್ತಿ ಎಂದು ಪ್ರಕಟಿಸಲಾಗಿದೆ.
ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಕ್ರಿಯರಾಗಿದ್ದಾರೆ. ಜನರನ್ನು ತಲುಪಲು ಮತ್ತು ತಮ್ಮ ಸರ್ಕಾರದ ಮಾಹಿತಿಗಳನ್ನು ಜನರೊಂದಿಗೆ ಹಂಚಿಕೊಳ್ಳಲು ಟ್ವಿಟರ್ ಅತ್ಯುತ್ತಮ ಮಾಧ್ಯಮ ಎಂಬುದು ಪ್ರಧಾನಿಯ ನಂಬಿಕೆಯಾಗಿದೆ. ಇದೇ ಕಾರಣಕ್ಕಾಗಿ ಅವರು ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಜನ ನಾಯಕನಾಗಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರ ಹೆಸರೂ ಕೂಡ ಪಟ್ಟಿಯಲ್ಲಿದ್ದು, 355ನೇ ಸ್ಥಾನ ಪಡೆದುಕೊಂಡಿದ್ದಾರೆ. ಸಚಿನ್ ಅಮೆರಿಕದ ನಟ ಡ್ವೇನ್ ಜಾನ್ಸನ್, ಲಿಯೊನಾರ್ಡೊ ಡಿಕಾಪ್ರಿಯೊ ಮತ್ತು ಯುಎಸ್ ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳನ್ನು ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ.