ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗೆ ಎರಡು ತಿಂಗಳಿದ್ದು, ಪರೀಕ್ಷೆ ನಡೆಯುತ್ತೇ: ಸಚಿವ ಸುರೇಶ್ ಕುಮಾರ್

ಚಾಮರಾಜನಗರ, ಏ. 16: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ನಡೆಯುತ್ತದೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜೂ. 21ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಗದಿಯಾಗಿದೆ. ಪರೀಕ್ಷೆ ನಡೆಸಲು ಕಳೆದ ವರ್ಷದ ನೀಡಿದ್ದ ಎಸ್‌ಒಪಿಯನ್ನೇ ಅಳವಡಿಸಬೇಕು. ಏನಾದರು ಸುಧಾರಣೆ ಮಾಡಬೇಕೆ ಎಂದು ಆರೋಗ್ಯ ಇಲಾಖೆಯನ್ನು ಕೇಳಿದ್ದೇವೆ ಎಂದು ತಿಳಿಸಿದರು.

ಪರೀಕ್ಷೆ ನಡೆಸುವಂತೆ ಎಲ್ಲಾ ಕಡೆಯಿಂದ ಒತ್ತಾಯ ಬರುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿ ಸಹ ಪರೀಕ್ಷೆ ನಡೆಸುವಂತೆ ಪತ್ರ ಬರೆದಿದ್ದಾರೆ. ಪರೀಕ್ಷೆ ಆರಂಭಕ್ಕೆ ಇನ್ನೂ ಎರಡು ತಿಂಗಳಿದೆ. ಈ ಹಿನ್ನೆಲೆಯಲ್ಲಿ ಆಗಿನ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನಿಸಲಾಗುವುದು. ಜತೆಗೆ 1 ರಿಂದ 9ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಬಗ್ಗೆ ಗುರುವಾರ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಅಂತಿಮ ತೀರ್ಮಾನ ಪ್ರಕಟಿಸುತ್ತೇವೆ ಎಂದರು.

ದೆಹಲಿಯಂತೆ ರಾಜ್ಯದಲ್ಲೂ
ಸಿಬಿಎಸ್‌ಇ ಪರೀಕ್ಷೆಯನ್ನು ರದ್ದು ಮಾಡಬೇಕೆ? ಪರೀಕ್ಷೆ ರದ್ದು ಮಾಡುವುದು ಸರಿಯೇ, ತಪ್ಪೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಸುರೇಶ್‌ ಕುಮಾರ್‌, ಪರೀಕ್ಷೆ ರದ್ದು ಮಾಡುವುದರಿಂದ ಹೆಚ್ಚು ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಪರೀಕ್ಷೆ ನಡೆಸದೆ ಹಾಗೇ ಪಾಸ್ ಮಾಡಿದರೆ, ಉತ್ತಮವಾಗಿ ಓದುವವರಿಗೂ ಹಾಗೂ ಓದದೇ ಇರುವವರಿಗೂ ಒಂದೇ ಆಗುತ್ತದೆ. ಇದರಿಂದ ಒಳ್ಳೆ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಈ ಕಾರಣದಿಂದ ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಮಾಡುವುದು ಬೇಡ. ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.