Visit Channel

ಕುಂದಾಪುರದ ಕಾಲೇಜಿನಲ್ಲಿ ಹಿಜಾಬ್ ತಡೆ!

hijaab

ಹಿಜಾಬ್‌ ಮತ್ತು ಕೇಸರಿ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕುಂದಾಪುರ ಕಾಲೇಜಿನಲ್ಲೂ ಇದರ ಬಿಸಿ ತಟ್ಟಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದಿದ್ದಾರೆ. ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು. ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಿದ್ಯಾರ್ಥಿನಿಯರ ವಾಗ್ವಾದ ನಡೆಯಿತು.

udupi college


ನಾವು ಮೊದಲಿನಿಂದಲೂ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿದ್ದೇವೆ. ಬೇಕಾದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಬರಲಿ. ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ. ಕುಂದಾಪುರ ಸರ್ಕಾರಿ ಕಾಲೇಜಿನ ಉಲ್ಲೇಖವಿದ್ದರೆ ಮಾತ್ರ ನಾವು ಹಿಜಾಬ್ ತೆಗೆಯುತ್ತೇವೆ ಎಂದು ವಿದ್ಯಾರ್ಥಿನಿಯರು ವಾದಿಸಿದ್ದಾರೆ. ಇದಕ್ಕೆ ಉತ್ತರಿಸಿದ ಪ್ರಾಂಶುಪಾಲರು ಸರ್ಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ 1200ಕ್ಕೂ ಅಧಿಕ ಕಾಲೇಜಿದೆ. ಪ್ರತಿಯೊಂದು ಕಾಲೇಜಿಗೂ ನೋಟಿಸ್ ನೀಡಲು ಆಗುವುದಿಲ್ಲ. ಸರ್ಕಾರ ಏನು ಹೇಳುತ್ತದೋ ಅದನ್ನು ನಾವು ಅನುಸರಿಸುತ್ತೇವೆ ಎಂದು ತಿಳಿಸಿದರು. ನೂರಾರು ಹಿಂದೂ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದರು. ಆದರೆ ಇಂದು ಕೇಸರಿ ಶಾಲು ತೊಡದೇ ಕಾಲೇಜಿಗೆ ಹಿಂದೂ ವಿದ್ಯಾರ್ಥಿಗಳು ಬಂದಿದ್ದಾರೆ.

hijaab


ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ಉಸ್ತುವಾರಿ ಸಚಿವ ಎಸ್. ಅಂಗಾರ, ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಅಸಾಧ್ಯವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಜೊತೆ ಚರ್ಚಿಸಿ ಸರ್ಕಾರ ಒಂದು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಈ ರೀತಿಯ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಯಾರು ಕೂಡ ತಮಗೆ ಬೇಕಾದಂತೆ ಕಾಲೇಜಿಗೆ ಬರಲು ಅವಕಾಶವಿಲ್ಲ. ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ. ಜಿಲ್ಲಾಡಳಿತದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.