ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ವಿದ್ಯಾರ್ಥಿನಿಯರ ಹೈಡ್ರಾಮಾ ; ಮನೆಗೆ ವಾಪಸ್!

hijab

ನಮಗೆ ಹಿಜಾಬ್(Hijab) ಧರಿಸಿಯೇ ಪರೀಕ್ಷೆ(Exam) ಬರೆಯಲು ಅನುಮತಿ(Permission) ನೀಡಬೇಕೆಂದು ಪಟ್ಟು ಹಿಡಿದಿರುವ ಉಡುಪಿಯ(Udupi) ಹಿಜಾಬ್ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮಾ ಸೃಷ್ಟಿಸಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಗಳು ಶುರುವಾಗಿವೆ. ಪರೀಕ್ಷೆ ಆರಂಭಕ್ಕೂ ಮುನ್ನ ಕಾಲೇಜಿನಿಂದ ಹಾಲ್‍ಟಿಕೆಟ್ ಪಡೆದಿರುವ ಉಡುಪಿಯ ಸರ್ಕಾರಿ ಮಹಿಳಾ ಕಾಲೇಜಿನ ಆಲಿಯಾ ಅಸಾದಿ ಮತ್ತು ರೇಷಂ ಪರೀಕ್ಷಾ ಕೇಂದ್ರದ ಬಳಿ ತೆರಳಿ ಹಿಜಾಬ್ ಧರಿಸಿಯೇ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. ಶಾಲಾ ಆಡಳಿತ ಮಂಡಳಿ ಎಷ್ಟೇ ಮನವೊಲಿಸಲು ಪ್ರಯತ್ನ ಪಟ್ಟರು ವಿದ್ಯಾರ್ಥಿನಿಯರು ತಮ್ಮ ಪಟ್ಟು ಬಿಡಲಿಲ್ಲ. ಕೊನೆಗೆ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದರು.

ಈ ವೇಳೆ ವಿದ್ಯಾರ್ಥಿನಿಯರು ತಹಶೀಲ್ದಾರ್ ಅರ್ಚನಾ ಭಟ್ ಅವರೊಂದಿಗೆ ವಾಗ್ವಾದಕ್ಕಿಳಿದರು. ಹೈಕೋರ್ಟ್(Highcourt) ಆದೇಶದನ್ವಯ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ. ಶಿಕ್ಷಣ ಇಲಾಖೆ ಕೂಡಾ ಈ ಕುರಿತು ಈಗಾಗಲೇ ಸ್ಪಷ್ಟ ಆದೇಶ ಹೊರಡಿಸಿದೆ. ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಿರಿ, ಇಲ್ಲವೆಂದರೆ ಪರೀಕ್ಷೆ ಕೇಂದ್ರದಿಂದ ಹೊರ ನಡೆಯಿರಿ ಎಂದು ತಹಶೀಲ್ದಾರ್ ಖಡಕ್ ಸೂಚನೆ ನೀಡಿದರು. ಇನ್ನು ಉಡುಪಿಯ ಹಿಜಾಬ್ ವಿದ್ಯಾರ್ಥಿನಿಯರಿಗೆ ಕೊನೆಯ ಕ್ಷಣದಲ್ಲಿಯೂ ಹಾಲ್‍ಟಿಕೆಟ್ ಪಡೆಯಲು ಅವಕಾಶ ನೀಡಲಾಗಿತ್ತು.

ಉಡುಪಿಯ ಕಾಲೇಜಿನಲ್ಲಿ ಒಟ್ಟು 75 ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಆದರೆ ಆರು ವಿದ್ಯಾರ್ಥಿನಿಯರನ್ನು ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೇ ಪರೀಕ್ಷೆಗೆ ಹಾಜರಾಗಿದ್ದಾರೆ. ಆರು ವಿದ್ಯಾರ್ಥಿನಿಯರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸದ್ಯದ ಮಾಹಿತಿ ಪ್ರಕಾರ ಹಿಜಾಬ್ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೇ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ದೊರೆತಿದೆ.

Exit mobile version