ಉಗಾಂಡ ಪ್ರಜೆಯಿಂದ 7 ಕೋಟಿ ಮೌಲ್ಯದ ಹೆರಾಯಿನ್ ವಶ!

ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಭೇಟೆಯಾಡಿದ್ದು, ಉಗಾಂಡ ಪ್ರಜೆಯಿಂದ ಬರೋಬ್ಬರಿ 1 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಆತನ ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಉಗಾಂಡಾದ ಡ್ರಗ್ಸ್ ಪೆಡ್ಲರ್ ನನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 32 ವರ್ಷದ ಉಗಾಂಡಾದ ಪ್ರಜೆಯನ್ನು ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿ ಬಂಧಿಸಿದ್ದಾರೆ.


ಬಂಧಿತನನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಿಂದ 3 ದಿನಗಳ ಅವಧಿಯಲ್ಲಿ 79 ಕ್ಯಾಪ್ಪುಲ್ ಹೊರಗೆ ತೆಗೆಯಲಾಗಿದೆ. ಹೆರಾಯಿನ್ ತುಂಬಿದ ಕ್ಯಾಪ್ಪುಲ್ ಗಳನ್ನು ನುಂಗಿ ಆತ ಸ್ಮಗ್ಲಿಂಗ್ ಮಾಡುತ್ತಿದ್ದ. 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ವಶಕ್ಕೆ ಪಡೆದು ಆತನ ವಿರುದ್ಧ ಎನ್ಡಿಪಿಎಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಟ್ಟೆಯಲ್ಲಿ ಮಾದಕ ದ್ರವ್ಯ ಸಾಗಿಸುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ.


ಔಷಧಿ ಘಟಕದಲ್ಲಿ ಸ್ಪೋಟ ಐವರ ಬಲಿ :


ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಹೆಟೆರೋ ಔಷಧ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವಿಶಾಖಪಟ್ಟಣಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ನಕ್ಕಪಲ್ಲಿನಲ್ಲಿರುವ ಔಷಧ ತಯಾರಿಕ ಘಟಕದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದ ಬಳಿಕ ಕೆಲಸವನ್ನು ಸ್ಥಗಿತಗೊಳಿಸಿದೆ. ಗಾಯಗೊಂಡವರಲ್ಲಿ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Exit mobile version