UGC-NET 2024: ಹೊಸ ದಿನಾಂಕ ಪ್ರಕಟಿಸಿದ NTA

New Delhi: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್ಟಿಎ) ಯುಜಿಸಿ-ನೆಟ್ 2024 (UGC-NET) ಪರೀಕ್ಷೆಯ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.

UGC-NET

ಈ ಬಾರಿಯ ಯುಜಿಸಿ-ಎನ್ಇಟಿ ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ (August) 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು ಮತ್ತು CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ತಿಳಿಸಿದೆ.

ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. UGC NET ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿರುತ್ತವೆ. ಈ ಹಿಂದೆ, UGC NET ಜೂನ್ 2024 ಪರೀಕ್ಷೆ ಆಫ್ಲೈನ್ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಮುಗಿದ ಮರುದಿನವೇ, ಶಿಕ್ಷಣ ಸಚಿವಾಲಯವು ಇಡೀ ಪರೀಕ್ಷೆಯನ್ನು ರದ್ದುಗೊಳಿಸಿತು. ನಂತರ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸಲಾಗಿದೆ. ಸದ್ಯ ಸಿಬಿಐ (CBI) ತನಿಖೆ ಪ್ರಗತಿಯಲ್ಲಿದೆ.

Exit mobile version