ಉಗ್ರರ ದಾಳಿ; 7 ಮಂದಿ ನಾಗರಿಕರಿಗೆ ಗಾಯ

ಶ್ರೀನಗರ, ಜ. 02: ಜಮ್ಮು ಕಾಶ್ಮೀರದ ಪುಲ್ವಾಮಾದ ಟ್ರಾಲ್​ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.

ಉಗ್ರರು ಭದ್ರತಾ ಸಿಬ್ಬಂದಿಯೆಡೆಗೆ ಗ್ರೆನೇಡ್ ಎಸೆದರೂ ಅದು ಗುರಿ ತಪ್ಪಿ ಮಾರುಕಟ್ಟೆ ಪ್ರದೇಶದಲ್ಲಿ ಬಿದ್ದು ಸ್ಫೋಟಗೊಂಡಿದ್ದರಿಂದ ಅಲ್ಲಿದ್ದ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Exit mobile version