ಬೆಂಗಳೂರು, ಆ. 10: ಆಗಸ್ಷ್ 15ರ ವರೆಗೂ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಸ್ಪಸ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಪಾಸಿಟಿವ್ ರೇಟ್ ನಿಧಾನಗತಿಯಲ್ಲಿ ಏರಿಕೆ ಆಗುತ್ತಿದ್ದು, ಇನ್ನು ಒಂದು ವಾರದಲ್ಲಿ ಪಾಸಿಟಿವ್ ರೇಟ್ ಕಡಿಮೆಯಾಗದಿದ್ದಲ್ಲಿ ಮಂದಿನ ದಿನಗಳಲ್ಲಿಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಶೇ 2% ಗಿಂತ ಜಾಸ್ತಿ ಪಾಸಿಟಿವ್ ಇರುವ ಕಡೆಗಳಲ್ಲಿ ಮಾತ್ರ ಈಗ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಬೆಂಗಳೂರಿನಲ್ಲಿ ಪಾಸಿಟಿವ್ ದರ ಶೇ 0.94 ಇಂದ 0.64ಗೆ ಇಳಿಕೆಯಾಗಿದೆ. ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ 179 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 479 ಮಂದಿ ಒಳರೋಗಿಗಳು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ನಿಂದ ಬಳಲುತ್ತಿರುವ ಮಕ್ಕಳಿಗಾಗಿ ಇಗಾಗಲೇ ಪದ್ಮನಾಭನಗರದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣಮಾಡಲಾಗಿದೆ. ಉಳಿದ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಕೂಡ ಶೀಘ್ರದಲ್ಲಿ ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಆರ್. ಅಶೋಕ್ ತಿಳಿಸಿದರು.