Good News for Unemployed: Application Invitation for Free Bike Repair Training
Job News: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Sri Dharmasthala Manjunatheshwar Education Trust) ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ (August) 21 ರಿಂದ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ (BPL Card) ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು (Aadhar Card) ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.
ಈ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ (Rudset Institute), ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Unemployment News Today Viral News
Job News: 30 days free training on bike repair and service organized by Rudset Institute in collaboration with Sri Dharmasthala Manjunatheshwar Education Trust and Canara Bank has been conducted from August 21, interested unemployed youth from rural areas of all districts of the state can apply. can be submitted.
Aspirants should be between 18 to 45 years of age and able to read and write Kannada language. Must have BPL Card or Job Card and Aadhar Card. August 17 is the last day to apply.
This training is compulsorily residential and free food and accommodation will be provided during the training period and certificate will be issued by the Ministry of Rural Development of the Central Government after the completion of the training.
Ravi Kumar, Director of Rudset Institute, Bengaluru Branch, said in a release that those interested can contact Rudset Institute, Arishinakunte, Nelamangala Taluk, Bangalore Rural District or mobile number: 9740982585, 9380162042 to apply and for more information.