• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇಂದ್ರ ಬಜೆಟ್ 2026 : ರೈತರ ಆದಾಯ ಹೆಚ್ಚಿಸಲು ಹೊಸ ಯೋಜನೆಗಳ ಘೋಷಣೆ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಕೇಂದ್ರ ಬಜೆಟ್ 2026 : ರೈತರ ಆದಾಯ ಹೆಚ್ಚಿಸಲು ಹೊಸ ಯೋಜನೆಗಳ ಘೋಷಣೆ
0
SHARES
15
VIEWS
Share on FacebookShare on Twitter
  • ತೆಂಗಿನಕಾಯಿ, ಗೋಡಂಬಿ, ಶ್ರೀಗಂಧ ಕೃಷಿಗೆ (Union Budget 2026 New schemes ) ಉತ್ತೇಜನ; ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್
  • ಉತ್ಪಾದನೆ, ಸಂಸ್ಕರಣೆ ಮತ್ತು ರಫ್ತು ವೃದ್ಧಿಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರಗಳು
  • ರೈತರ ಪರ ಕೇಂದ್ರ ಬಜೆಟ್ : ಆದಾಯ ವೃದ್ಧಿಗೆ ಹೊಸ ದಾರಿ

New delhi: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದ ಕೇಂದ್ರ ಸರ್ಕಾರವು 2026-27ನೇ ಸಾಲಿನ (Union Budget 2026 New schemes) ಬಜೆಟ್ ಅನ್ನು ಮಂಡಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಈ ಬಜೆಟ್‌ನಲ್ಲಿ ದೇಶದ ಆರ್ಥಿಕ ಬೆಳವಣಿಗೆ ಜೊತೆಗೆ ರೈತರು, ಗ್ರಾಮೀಣ ಪ್ರದೇಶ, ಸಣ್ಣ ಉದ್ಯಮಗಳು ಹಾಗೂ ಆರೋಗ್ಯ–ಶಿಕ್ಷಣ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ.

“ವಿಕಸಿತ ಭಾರತ” ಗುರಿಯನ್ನು ಸಾಧಿಸುವ ದೃಷ್ಟಿಯಿಂದ ಬಜೆಟ್ ರೂಪಿಸಲಾಗಿದ್ದು, ಎಲ್ಲ ವರ್ಗದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಘೋಷಿಸಲಾಗಿದೆ.

Union Budget 2026 New schemes

ಈ ಬಜೆಟ್‌ನ ಪ್ರಮುಖ ಅಂಶವೆಂದರೆ ರೈತರಿಗೆ ನೀಡಲಾದ ವಿಶೇಷ ಪ್ಯಾಕೇಜ್‌ಗಳು. ಸಣ್ಣ ಮತ್ತು ಅತಿ ಸಣ್ಣ (Union Budget 2026 New schemes) ರೈತರ ಆದಾಯ ಹೆಚ್ಚಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ಹಣಕಾಸು ಸಚಿವೆ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದ್ದಾರೆ.

ವಿಶೇಷವಾಗಿ ತೆಂಗಿನಕಾಯಿ ಬೆಳೆಗೆ ಹೊಸ ಉತ್ತೇಜನ ನೀಡಲಾಗಿದ್ದು, ಸುಮಾರು 1 ಕೋಟಿ ರೈತರು ಜೀವನೋಪಾಯಕ್ಕಾಗಿ ತೆಂಗಿನಕಾಯಿ ಕೃಷಿಯನ್ನು ಅವಲಂಬಿಸಿರುವುದನ್ನು ಉಲ್ಲೇಖಿಸಿದ್ದಾರೆ.

ತೆಂಗಿನಕಾಯಿ ಉತ್ಪಾದನೆ, ಸಂಸ್ಕರಣೆ ಮತ್ತು ರಫ್ತು ವೃದ್ಧಿಗೆ ಹೊಸ ಯೋಜನೆಗಳನ್ನು ಘೋಷಿಸಲಾಗಿದ್ದು, ಇದು ರೈತರ ಆದಾಯ ಹೆಚ್ಚಿಸಲು ಸಹಕಾರಿಯಾಗಲಿದೆ.

ಇದೇ ವೇಳೆ ಗೋಡಂಬಿ, ಕೋಕೋ ಹಾಗೂ ಶ್ರೀಗಂಧ ಕೃಷಿಗೆ ಹೊಸ ಜೀವ ತುಂಬುವ ಕಾರ್ಯಕ್ರಮಗಳನ್ನು ಸರ್ಕಾರ ಮುಂದಿಟ್ಟಿದೆ.

ಕಚ್ಚಾ ಗೋಡಂಬಿ ಮತ್ತು ತೆಂಗಿನಕಾಯಿ ಸಂಸ್ಕರಣೆಯಲ್ಲಿ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ.

2030ರ ವೇಳೆಗೆ ಭಾರತೀಯ ಗೋಡಂಬಿ ಮತ್ತು ಕೋಕೋವನ್ನು ಜಾಗತಿಕ ಮಟ್ಟದ ಪ್ರೀಮಿಯಂ (Premium) ಬ್ರ್ಯಾಂಡ್‌ಗಳಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ.

ಜೊತೆಗೆ, ಶ್ರೀಗಂಧವು ಭಾರತದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದ್ದು, ಅದರ ಕೃಷಿ ಹಾಗೂ ಸಂಸ್ಕರಣೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆ ಕೈಜೋಡಿಸುವುದಾಗಿ ಘೋಷಿಸಿದೆ.

ಪರ್ವತ ಪ್ರದೇಶಗಳ ರೈತರಿಗೂ ಈ ಬಜೆಟ್‌ನಲ್ಲಿ ವಿಶೇಷ ಅವಕಾಶಗಳನ್ನು ನೀಡಲಾಗಿದೆ. ಹಳೆಯ ಹಾಗೂ ಕಡಿಮೆ ಇಳುವರಿ ನೀಡುವ ತೋಟಗಳನ್ನು ಪುನಶ್ಚೇತನಗೊಳಿಸಲು ಹೊಸ ಕಾರ್ಯಕ್ರಮ ಘೋಷಿಸಲಾಗಿದೆ.

ವಾಲ್ನಟ್, ಬಾದಾಮಿ ಮತ್ತು ಪೈನ್ ಬೀಜಗಳ ಸುಧಾರಿತ ಕೃಷಿಗೆ ಉತ್ತೇಜನ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಇದರಿಂದ ಯುವಜನರನ್ನು ಕೃಷಿ ಕ್ಷೇತ್ರದತ್ತ ಆಕರ್ಷಿಸಿ, ಈ ಬೆಳೆಗಳಿಗೆ ಮೌಲ್ಯವರ್ಧನೆ ಸಾಧ್ಯವಾಗಲಿದೆ.ಈ ಕ್ರಮಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ.

ಇದಕ್ಕೆ ಜೊತೆಗೆ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ತಂತ್ರಜ್ಞಾನ ಕ್ಷೇತ್ರಗಳಿಗೂ ದೊಡ್ಡ ಘೋಷಣೆಗಳು ನಡೆದಿವೆ. ಮೂರು ಹೊಸ ಏಮ್ಸ್ ಆಸ್ಪತ್ರೆಗಳ ನಿರ್ಮಾಣ, ಕ್ಯಾನ್ಸರ್ ಸೇರಿದಂತೆ 17 ಪ್ರಮುಖ ಔಷಧಿಗಳ ಬೆಲೆ ಇಳಿಕೆ, 7 ಅಪರೂಪದ ಕಾಯಿಲೆಗಳ ಔಷಧಗಳ ಮೇಲೆ ತೆರಿಗೆ ವಿನಾಯಿತಿ ನೀಡಲಾಗಿದೆ.

AI ಮಿಷನ್ ಮೂಲಕ ವಿದ್ಯಾರ್ಥಿಗಳು ಮತ್ತು ರೈತರಿಗೆ ಹೊಸ ಅವಕಾಶಗಳು ಸಿಗಲಿವೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. ಸೆಮಿಕಂಡಕ್ಟರ್ ಮಿಷನ್‌ಗೆ ₹40,000 ಕೋಟಿ ಮೀಸಲಿಟ್ಟು, ಭಾರತವನ್ನು ತಂತ್ರಜ್ಞಾನದಲ್ಲಿ ಮುಂಚೂಣಿಗೆ ತರುವ ಪ್ರಯತ್ನ ಮಾಡಲಾಗಿದೆ.

ಒಟ್ಟಾರೆ, ಈ ಬಜೆಟ್ ರೈತರು, ಯುವಕರು, ಮಹಿಳೆಯರು ಹಾಗೂ ಮಧ್ಯಮ ವರ್ಗದ ಜನರಿಗೆ ಹೊಸ ಆಶಾಕಿರಣ ನೀಡುವಂತಹದ್ದಾಗಿದೆ.

Tags: budget2026Farmerfinanceministerprimeminister

Related News

ಬಂಡೀಪುರ ಸಫಾರಿಗೆ ಹೊಸ ನಿಯಮ: ಮೊಬೈಲ್ ನಿಷೇಧ, ನಿಯಮ ಉಲ್ಲಂಘಿಸಿದ್ರೆ ದಂಡ
ಪ್ರಮುಖ ಸುದ್ದಿ

ಬಂಡೀಪುರ ಸಫಾರಿಗೆ ಹೊಸ ನಿಯಮ: ಮೊಬೈಲ್ ನಿಷೇಧ, ನಿಯಮ ಉಲ್ಲಂಘಿಸಿದ್ರೆ ದಂಡ

March 14, 2026
ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು
ದೇಶ-ವಿದೇಶ

ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು

March 14, 2026
ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರು ಹಣವನ್ನು ಸುರಕ್ಷಿತವಾಗಿಡಲು ಸರಳ ಹೂಡಿಕೆ ತಂತ್ರಗಳು
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರು ಹಣವನ್ನು ಸುರಕ್ಷಿತವಾಗಿಡಲು ಸರಳ ಹೂಡಿಕೆ ತಂತ್ರಗಳು

March 14, 2026
ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ! ಏಜೆನ್ಸಿಗಳ ಹೆಸರಿನಲ್ಲಿ ಸೈಬರ್ ವಂಚನೆ
ಪ್ರಮುಖ ಸುದ್ದಿ

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ! ಏಜೆನ್ಸಿಗಳ ಹೆಸರಿನಲ್ಲಿ ಸೈಬರ್ ವಂಚನೆ

March 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.