ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ (Union Cabinet meeting) ನಡೆಯಿತು. ಮಹತ್ವದ ಈ ಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಮಂತ್ರಿಮಂಡಲ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಅಂತೆಯೇ ಸಂಸತ್ನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ‘One Nation, One Election’ ಬಿಲ್ ಮಂಡಿಸಿ ಅಂಗೀಕಾರ ಪಡೆಯುವ ಲೆಕ್ಕಾಚಾರದಲ್ಲಿ ಕೇಂದ್ರ ಸರ್ಕಾರವಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ (Lok Sabha and State Assemblies) ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ (Central Govt) ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ram Nath Kovind) ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.ಲೋಕಸಭೆ, ರಾಜ್ಯ ವಿಧಾನಸಭೆಗಳು (Lok Sabha, State Assemblies) ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ (Simultaneous election) ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.
ಆದರೆ, ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ಚುನಾವಣೆ (Simultaneous Lok Sabha and state elections) ನಡೆಸುವ ಕಾಯ್ದೆಗೆ ಕಾಂಗ್ರೆಸ್ ಮತ್ತು ಎಎಪಿಯಂತಹ ಹಲವಾರು ಇಂಡಿಯಾ ಬ್ಲಾಕ್ ಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ. ಇದು ಕೇಂದ್ರದಲ್ಲಿ ಆಡಳಿತಾರೂಢ ಪಕ್ಷಕ್ಕೆ ಲಾಭವಾಗಲಿದೆ ಎಂದು ವಿಪಕ್ಷಗಳು ಆರೋಪಿಸಿದ್ದು, ಆದರೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಿರಾಗ್ ಪಾಸ್ವಾನ್ನಂತಹ ಪ್ರಮುಖ ಎನ್ಡಿಎ ಮಿತ್ರಪಕ್ಷಗಳು (Key NDA allies like Paswan) ಏಕಕಾಲದ ಚುನಾವಣೆಯನ್ನು ಬೆಂಬಲಿಸಿವೆ ಅನ್ನೋದು ಗಮನಾರ್ಹ ಸಂಗತಿಯಾಗಿದೆ.