ದೇಶದ ಬಡವರಿಗೆ 2 ತಿಂಗಳು ಉಚಿತ ಆಹಾರಧಾನ್ಯ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ನವದೆಹಲಿ, ಮೇ. 05: ದೇಶದ ಬಡವರಿಗೆ 2 ತಿಂಗಳು ಆಹಾರಧಾನ್ಯ ನೀಡಲು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. 79.88 ಕೋಟಿ ಫಲಾನುಭವಿಗಳಿಗೆ ಮೇ ಮತ್ತು ಜೂನ್ ತಿಂಗಳಿನಲ್ಲಿ ಉಚಿತ ಆಹಾರ ಧಾನ್ಯ ನೀಡಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಅದರಂತೆ ಪ್ರತಿಯೊಬ್ಬರಿಗೂ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್‌ ಅನ್ನ ಯೋಜನೆ-3 ಜಾರಿ ಮಾಡಲಾಗುವುದು. ಇದಕ್ಕಾಗಿ 25,332 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಲಾಗಿದೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಆಹಾರಧಾನ್ಯ ನೀಡಿಕೆಗೆ ಒಪ್ಪಿಗೆ ನೀಡಲಾಗಿದ್ದು, ಉಳಿದಂತೆ ದೇಶಾದ್ಯಂತ ಲಾಕ್​ಡೌನ್ ಜಾರಿ ಬಗ್ಗೆ ಇಂದಿನ ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡಿಲ್ಲ. ಎರಡು ತಿಂಗಳ ಕಾಲ ನಾಗರಿಕ ಪೂರೈಕೆ ಮೂಲಕ ಅಕ್ಕಿ, ಗೋಧಿ ನೀಡಲಾಗುತ್ತದೆ. ಪ್ರತಿ ಮೆಟ್ರಿಕ್ ಟನ್ ಅಕ್ಕಿಗೆ 36,789 ರೂಪಾಯಿ ಹಾಗೂ ಪ್ರತಿ ಮೆಟ್ರಿಕ್ ಟನ್ ಗೋಧಿಗೆ 25,731 ರೂಪಾಯಿ ನೀಡಿ ಖರೀದಿ ಮಾಡಲಾಗುತ್ತದೆ. ಎರಡು ತಿಂಗಳಿಗೆ 80 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ನೀಡಿಕೆ ‌ಕಾರ್ಯ ನಿರ್ವಹಿಸಲಾಗುತ್ತದೆ ಎಂಬ ಮಾಹಿತಿ ಇದೆ.

Exit mobile version