Visit Channel

ಬುರ್ಜ್ ಖಲೀಫಾದಲ್ಲಿ “ವಿಕ್ರಾಂತ್ ರೋಣ” ನ ಅನಾವರಣ: ವಿಶ್ವದ ಅತಿ ಎತ್ತರದ ಕಟ್ಟದ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್

WhatsApp Image 2021-02-01 at 6.33.09 AM

ದುಬೈ, ಫೆ. 01: ಅದು ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡಿದ ಕ್ಷಣ, ವಿಶ್ವದ ಅತಿದೊಡ್ಡ ಕಟ್ಟಡ ಬುರ್ಜ್‌ ಖಲೀಫಾದ ಮೇಲೆ ನಡೆಯಿತು “ವಿಕ್ರಾಂತ್ ರೋಣ” ನ ಅನಾವರಣ.

ಹೌದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ, ಕುತೂಹಲ ಕೆರಳಿಸಿದ್ದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಬಿಡುಗಡೆಯಾಗಿದೆ. ಅದರ ಜೊತೆಗೆ ಸಿನಿಮಾ ರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರ ಕಟೌಟ್ ಸಹ ಪ್ರದರ್ಶನವಾಗಿದೆ.

ಸುದೀಪ್ ಅವರ ಬೆಳ್ಳಿ ಮಹೋತ್ಸವದ ಹಿನ್ನೆಲೆ 2000 ಅಡಿಗೂ ಎತ್ತರದ ವಿಶ್ವವಿಖ್ಯಾತ ಕಟ್ಟಡದ ಮೇಲೆ ಕಿಚ್ಚನ ಕಟೌಟ್ ಪ್ರದರ್ಶನವಾಗಿದೆ. ಕಿಚ್ಚ ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇವೆಲ್ಲದರ ನಡುವೆ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಕನ್ನಡದ ಬಾವುಟ ರಾರಾಜಿಸಿದ್ದು, ಕೋಟ್ಯಾಂತರ ಕನ್ನಡಿಗರ ಹಿರಿಮೆ ಹೆಚ್ಚಿಸಿತು.

ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಬಿಡುಗಡೆಯಾಗಿದ್ದು, ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಝಲಕ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ದುಬೈನಲ್ಲಿದ್ದ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಜೈಕಾರ ಹಾಕಿದ್ದಾರೆ. ದುಬೈನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿರ್ಮಾಪಕ ಜ್ಯಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ, ನಟ ನಿರೂಪ್ ಭಂಡಾರಿ, ಪ್ರಿಯಾ ಸುದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು. 

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.