ನಾಳೆ ನಂದಕಿಶೋರ್ ಚಿತ್ರದ ಶೀರ್ಷಿಕೆ ಅನಾವರಣ

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ‘ಪೊಗರು’ ಖ್ಯಾತಿಯ ನಂದ ಕಿಶೋರ್ ನಿರ್ದೇಶಿಸುತ್ತಿದ್ದಾರೆ.

ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ‘ಬಂಡೆ ಮಹಾಂಕಾಳಿ’ ದೇವಸ್ಥಾನದಲ್ಲಿ ನೆರವೇರಲಿದೆ.
ಮುಹೂರ್ತಕ್ಕೂ ಮೊದಲು ನಾಳೆ ಜುಲೈ 1 ರಂದು ಶೀರ್ಷಿಕೆ ಅನಾವರಣ ಮಾಡಲಿರುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

ಬೆಂಗಳೂರು, ಬೆಳಗಾವಿ, ಹೊಸಪೇಟೆ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದ್ದು, ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆಯಂತೆ. ಕರ್ನಾಟಕದ ಅನೇಕ ಊರುಗಳಲ್ಲಿರುವ ಪ್ರತಿಭೆಗಳನ್ನು ಆನ್ ಲೈನ್ ಆಡಿಷನ್ ಮೂಲಕ ಆರಿಸಿಕೊಳಲಾಗಿದೆ.
ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು “ಟಗರು” ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು.

ಇದು ಪುರುಷೋತ್ತಮ್ ಅವರು ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.
ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Exit mobile version