ಧಾರ್ಮಿಕ ಕಾರ್ಯಕ್ರಮಗಳು ನಿಗದಿತ ಸ್ಥಳದಲ್ಲಿ ಮಾತ್ರ ನಡೆಯಬೇಕು, ಸಂಚಾರಕ್ಕೆ ತೊಂದರೆಯಾಗಬಾರದು : ಯೋಗಿ ಸೂಚನೆ!

yogi adityanath

ಉತ್ತರಪ್ರದೇಶದ(UttarPradesh) ಮುಖ್ಯಮಂತ್ರಿ(ChiefMinister) ಯೋಗಿ ಆದಿತ್ಯನಾಥ್(YogiAdityanath) ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನಲೆಯಲ್ಲಿ ಶಾಂತಿ(Peace) ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರತಿಬಾರಿ ಉತ್ತರಪ್ರದೇಶದಲ್ಲಿ ಕೋಮು ಗಲಭೆಗಳು ನಡೆಯುತ್ತವೆ. ಆದರೆ ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೋಲಿಸ್(Police) ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಾಲು ಸಾಲು ಹಬ್ಬಗಳಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳ ರಜೆಗಳನ್ನು ರದ್ದುಗೊಳಿಸಿದ್ದಾರೆ. ರಜೆ ಮೇಲೆ ತೆರಳಿರುವ ಎಲ್ಲ ಅಧಿಕಾರಿಗಳು ಮತ್ತು ಸಾಮಾನ್ಯ ನೌಕರರು ಮುಂದಿನ 24 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ. ಮೇ 4ನೇ ತಾರೀಖಿನವರೆಗೂ ಕಾನ್‍ಸ್ಟೇಬಲ್‍ನಿಂದ್ ಹಿಡಿದು ಎಡಿಜಿ ಮಟ್ಟದ ಎಲ್ಲ ಅಧಿಕಾರಿಗಳ ರಜೆಗಳನ್ನು ರದ್ದುಗೊಳಿಸಲಾಗಿದೆ. ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

ಇದೇ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಿಗದಿತ ಸ್ಥಳದಲ್ಲಿ ಮಾತ್ರ ನಡೆಯಬೇಕು. ರಸ್ತೆ ಸಂಚಾರಕ್ಕೆ ಅಡ್ಡಿಯಾಗುವಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸದಂತೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯದ ಎಲ್ಲಾ ಪೋಲಿಸ್ ಠಾಣಾಧಿಕಾರಿಗಳು ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಬೇಕು. ಶಾಂತಿಯುತ ಪರಿಸ್ಥಿತಿ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲ ಪೋಲಿಸ್ ಅಧಿಕಾರಿಗಳು ಧಾರ್ಮಿಕ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದು, ಯಾವುದೇ ಗಲಭೆ ನಡೆಯದಂತೆ ಕಟ್ಟೆಚ್ಚರ ವಹಿಸಬೇಕು.

ಇನ್ನು ಕೋಮು ಪ್ರಚೋದನೆ ಮಾಡುವಂತ ಭಾಷಣ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಕಿಡಿಗೇಡಿತನದ ಹೇಳಿಕೆ ನೀಡುವವರಿಗೆ ಸುಸಂಸ್ಕೃತ ಸಮಾಜದಲ್ಲಿ ಇರಲು ಜಾಗ ನೀಡಬಾರದು ಎಂದು ಯೋಗಿ ಸೂಚಿಸಿದ್ದಾರೆ. ಇನ್ನು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಅನುಮತಿ ನೀಡಬೇಕು. ಯಾವುದೇ ಹೊಸ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು. ಮೆರವಣಿಗೆ ನಡೆಸಲು ಆಯೋಜಕರು ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತೇವೆಂದು ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

ಒಟ್ಟಾರೆಯಾಗಿ ಉತ್ತರಪ್ರದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯೋಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗಲಭೆಗಳಿಗೆ ಹೆಸರಾಗಿದ್ದ ರಾಜ್ಯದಲ್ಲಿಗ ಶಾಂತಿಮಂತ್ರ ಪಠಣ ಶುರುವಾಗಿದೆ.

Exit mobile version