ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಏರಿಕೆ ; ಕೋವಿಡ್ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಿದ ಯುಪಿ ಸರ್ಕಾರ!

Monkey Pox

ಉತ್ತರ ಪ್ರದೇಶ(UttarPradesh) ಸರ್ಕಾರವು ಮಂಗಳವಾರ ದೇಶದಲ್ಲಿ ಮಂಕಿಪಾಕ್ಸ್ ವೈರಸ್ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ, ರಾಜ್ಯದಲ್ಲಿ ಕೋವಿಡ್(Covid 19) ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ(Hospitals) ಮಂಕಿಪಾಕ್ಸ್(MonkeyPox) ಖಾಯಿಲೆಗೆ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಆಡಳಿತಕ್ಕೆ ಆದೇಶ ನೀಡಿದೆ. ಸದ್ಯ ರಾಜ್ಯದಲ್ಲಿ ಇದುವರೆಗೆ ಮಂಕಿಪಾಕ್ಸ್ ಖಾಯಿಲೆ ಪ್ರಕರಣ ವರದಿಯಾಗಿಲ್ಲ. ಆದರೂ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಲ್ಲ ಆಸ್ಪತ್ರೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಂಕಿಪಾಕ್ಸ್ ರೋಗ ಲಕ್ಷಣಗಳನ್ನು ಹೊಂದಿರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ದೆಹಲಿ ವಿಮಾನ ನಿಲ್ದಾಣದಿಂದ(Delhi Airport) ಲೋಕನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಮೂಲಗಳು ಪಿಟಿಐಗೆ(PTI) ತಿಳಿಸಿದ ದಿನದಂದು ಈ ನಿರ್ಧಾರವು ಯುಪಿ ಸರ್ಕಾರದಿಂದ ಅಧಿಕೃತವಾಗಿ ಹೊರಬಿದ್ದಿದೆ. ದೆಹಲಿಯಲ್ಲಿ ಭಾನುವಾರ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.

ನಗರದ ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ರೋಗಿಯ ವಿದೇಶ ಪ್ರಯಾಣದ ಹಿಂದೆ ಯಾವುದೇ ಸಂಪರ್ಕ ಇರುವ ಕುರಿತಾಗಿ ಸ್ಪಷ್ಟ ಮಾಹಿತಿಯಿಲ್ಲ. ಮತ್ತು, ಇದು ಭಾರತದಲ್ಲಿ ವರದಿಯಾಗುತ್ತಿರುವ ನಾಲ್ಕನೇ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣವಾಗಿದೆ. ಇನ್ನು ಶನಿವಾರ ವಿಶ್ವ ಆರೋಗ್ಯ ಸಂಸ್ಥೆ(WHO) ಮಂಕಿಪಾಕ್ಸ್ ವೈರಸ್ ಅನ್ನು ಅಂತಾರಾಷ್ಟ್ರೀಯ ಕಾಳಜಿಯ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.

ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ, ಮಂಕಿಪಾಕ್ಸ್ ಹರಡಿರುವ ದೇಶಗಳಿಂದ ಬರುವ ಜನರ ಮೇಲೆ ಕಣ್ಗಾವಲು ಹೆಚ್ಚಿಸಲಾಗುವುದು. ಇಲ್ಲಿಯವರೆಗೆ, ಮಂಕಿಪಾಕ್ಸ್ ವೈರಸ್‌ನ ಮಾದರಿಗಳನ್ನು ಪರೀಕ್ಷಿಸಲು ಭಾರತದಲ್ಲಿ ಒಟ್ಟು 16 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದೆ.

Exit mobile version