ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು, ಡಿ. 29: ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಕಡೂರಿನ ಗಣಸಾಗರ ಬಳಿ ಘಟನೆ ನಡೆದಿದೆ. ಹುಬ್ಬಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಶತಾಬ್ಧಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ರಾತ್ರಿ ತೋಟದ ಮನೆಯಿಂದ ಒಬ್ಬರೇ ಹೊರಟವರು ರಾತ್ರಿ ಎಷ್ಟೋತ್ತಾದರೂ ವಾಪಸ್ ಮನೆಗೆ ಮರಳಲಿಲ್ಲ. ಪೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಆಗುತ್ತಿರಲಿಲ್ಲ. ಇದರಿಂದ ಅನುಮಾನಗೊಂಡು ಹುಡುಕಿದಾಗ ಅವರು ರೈಲಿಗೆ ಸಿಕ್ಕಿ ಸಾವನ್ನಪ್ಪಿರೋದು ತಿಳಿದು ಬಂದಿದೆ.

ರೈಲಿನ ರಭಸಕ್ಕೆ ದೇಹ ಎರಡು ತುಂಡಾಗಿ ಬಿದ್ದಿದ್ದು, ಗನ್ ಮ್ಯಾನ್ ತಲೆ ಗುರುತು ಹಿಡಿದು ಧರ್ಮೇಗೌಡರದ್ದೇ ಅಂತ ಖಚಿತಪಡಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸದ್ಯ ಇದೊಂದು ಆತ್ಮಹತ್ಯೆ ಎನ್ನಲಾಗಿದೆ. ಆದರೆ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ,ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜೆಡಿಎಸ್ ಮುಖಂಡ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಧರ್ಮೇಗೌಡ ಅಂತಿಮ ದರ್ಶನಕ್ಕೆ ಚಿಕ್ಕಮಗಳೂರಿಗೆ ತೆರಳುವ ಸಾಧ್ಯತೆ ಇದೆ.

Latest News

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.