Visit Channel

UPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

upsc

ಕೇಂದ್ರ ಲೋಕ ಸೇವಾ ಆಯೋಗವು IPS ಮತ್ತು IAS ಹುದ್ದೆ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆ ಜೂನ್ ಹಾಗೂ ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ.

upsc


ಐಎಎಸ್: 861
ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು, ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯಸ್ಸು : ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ :ಸಾಮಾನ್ಯ ವರ್ಗದ ಅಭ್ಯರ್ಥಿಗಳು- ಗರಿಷ್ಠ 32 ವರ್ಷ ಹಿಂದುಳಿದ ವರ್ಗದ ಅಭ್ಯರ್ಥಿಗಳು- ಗರಿಷ್ಠ 35 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು- 37 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ -42 ವರ್ಷಗಳು.

UPSC Postpones Civil Services Prelims Examination To October 10

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ :
ಲೋಕಸೇವಾ ಆಯೋಗದ ವೆಬ್ಸೈಟ್ https://upsc.gov.in ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22-02-2022

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.