• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಟ್ರಂಪ್- ಮೋದಿ ಮಹತ್ವದ ದೂರವಾಣಿ ಮಾತುಕತೆ: ಭಾರತದ ಮೇಲಿನ ಪ್ರತಿ ಸುಂಕವನ್ನು ಶೇ.18ಕ್ಕಿಳಿಸಿದ ಅಮೆರಿಕ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಟ್ರಂಪ್- ಮೋದಿ ಮಹತ್ವದ ದೂರವಾಣಿ ಮಾತುಕತೆ: ಭಾರತದ ಮೇಲಿನ ಪ್ರತಿ ಸುಂಕವನ್ನು ಶೇ.18ಕ್ಕಿಳಿಸಿದ ಅಮೆರಿಕ
0
SHARES
16
VIEWS
Share on FacebookShare on Twitter
  • ಭಾರತ–ಅಮೆರಿಕ ವ್ಯಾಪಾರ (US reduces tariffs on India ) ಬಾಂಧವ್ಯಕ್ಕೆ ಹೊಸ ಅಧ್ಯಾಯ
  • ದೂರವಾಣಿ ಮಾತುಕತೆ ಬಳಿಕ ಭಾರತ–ಅಮೆರಿಕ ನಡುವೆ ಹೊಸ ವ್ಯಾಪಾರ ಒಪ್ಪಂದ; ಪ್ರತಿ ಸುಂಕ ಶೇ.25ರಿಂದ ಶೇ.18ಕ್ಕೆ ಕಡಿತ.
  • ಪ್ರತಿ ಸುಂಕ ಕಡಿತದ ಜೊತೆಗೆ ಇಂಧನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ವೃದ್ಧಿ

Washington:ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಬಲ (US reduces tariffs on India) ನೀಡುವ ಬೆಳವಣಿಗೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವೆ ಮಹತ್ವದ ದೂರವಾಣಿ ಮಾತುಕತೆ ನಡೆಯಿತು.

ಈ ಮಾತುಕತೆಯಲ್ಲಿ ವ್ಯಾಪಾರ, ಇಂಧನ, ಜಾಗತಿಕ ಭದ್ರತೆ ಹಾಗೂ ರಷ್ಯಾ–ಉಕ್ರೇನ್ (Russia–Ukraine) ಯುದ್ಧ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಗೆ ಬಂದವು.

ಮಾತುಕತೆ ಬಳಿಕ ಟ್ರಂಪ್ ಅವರು ತಮ್ಮದೇ ಸಾಮಾಜಿಕ ಜಾಲತಾಣವಾದ ‘ಟ್ರೂಥ್ ಸೋಶಿಯಲ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತ–ಅಮೆರಿಕ ನಡುವಿನ ವಾಣಿಜ್ಯ ಸಂಬಂಧಗಳಲ್ಲಿ ಮಹತ್ವದ ತಿರುವು ಕಂಡುಬಂದಿದೆ ಎಂದು ಹೇಳಿದ್ದಾರೆ.

ಟ್ರಂಪ್ ಅವರ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ ಅವರನ್ನು ತಮ್ಮ (US reduces tariffs on India) ಆತ್ಮೀಯ ಸ್ನೇಹಿತ ಮತ್ತು ಗೌರವಾನ್ವಿತ ನಾಯಕ ಎಂದು ವರ್ಣಿಸಲಾಗಿದೆ.

ಎರಡು ದೇಶಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮಹತ್ವದ ಒಪ್ಪಂದಕ್ಕೆ ತಲುಪಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಇದರ ಭಾಗವಾಗಿ, ಅಮೆರಿಕವು ಭಾರತದ ಮೇಲೆ ವಿಧಿಸುತ್ತಿದ್ದ ಪ್ರತಿ ಸುಂಕವನ್ನು ಶೇ.25ರಿಂದ ಶೇ.18ಕ್ಕೆ ಇಳಿಸಲು ಒಪ್ಪಿಗೆ ನೀಡಿದೆ.

ಈ ನಿರ್ಧಾರ ತಕ್ಷಣವೇ ಜಾರಿಗೆ ಬರಲಿದ್ದು, ಭಾರತೀಯ ರಫ್ತುಗಾರರಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇನ್ನೊಂದೆಡೆ, ಪ್ರಧಾನಿ ಮೋದಿ ಅವರು ಅಮೆರಿಕದಿಂದ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಹಾಗೂ ಇತರ ವಸ್ತುಗಳನ್ನು ಖರೀದಿಸಲು ಸಮ್ಮತಿಸಿದ್ದಾರೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ.

ವಿಶೇಷವಾಗಿ, ರಷ್ಯಾದಿಂದ ತೈಲ ಖರೀದಿಸುವುದನ್ನು ಹಂತಹಂತವಾಗಿ ಕಡಿಮೆ ಮಾಡಿ, ಅಮೆರಿಕ ಮತ್ತು ವೆನಿಜುವೆಲಾದಿಂದ ಹೆಚ್ಚಿನ ತೈಲ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಭಾರತ ಒಪ್ಪಿದೆ ಎನ್ನಲಾಗಿದೆ.

ಇದರಿಂದ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸುವ ಜಾಗತಿಕ ಪ್ರಯತ್ನಗಳಿಗೆ ಬೆಂಬಲ ದೊರೆಯಲಿದೆ ಎಂಬುದು ಟ್ರಂಪ್ ಅವರ ಅಭಿಪ್ರಾಯವಾಗಿದೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ, ಭಾರತವು ಮುಂದಿನ ವರ್ಷಗಳಲ್ಲಿ 500 ಬಿಲಿಯನ್ ಡಾಲರ್‌ಗಿಂತ (Billion Dollar) ಹೆಚ್ಚು ಮೌಲ್ಯದ ಇಂಧನ, ತಂತ್ರಜ್ಞಾನ, ಕೃಷಿ ಉತ್ಪನ್ನಗಳು, ಕಲ್ಲಿದ್ದಲು ಮತ್ತು ಇತರ ವಸ್ತುಗಳನ್ನು ಅಮೆರಿಕದಿಂದ ಖರೀದಿಸುವ ಬದ್ಧತೆಯನ್ನು ವ್ಯಕ್ತಪಡಿಸಿದೆ.

ಇದರೊಂದಿಗೆ, ಭಾರತ ತನ್ನ ಕಡೆಗಣಿಸಿದ ಸುಂಕ ಹಾಗೂ ಸುಂಕೇತರ ಅಡೆತಡೆಗಳನ್ನು ಬಹುತೇಕ ಶೂನ್ಯ ಮಟ್ಟಕ್ಕೆ ಇಳಿಸುವುದಾಗಿ ತಿಳಿಸಿದೆ. ಈ ಒಪ್ಪಂದದಿಂದ ಎರಡೂ ದೇಶಗಳ ಆರ್ಥಿಕ ಸಹಕಾರ ಮತ್ತಷ್ಟು ಗಟ್ಟಿಯಾಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಮೋದಿ–ಟ್ರಂಪ್ ನಡುವಿನ ಈ ಮಾತುಕತೆ ಭಾರತೀಯ ಷೇರು ಮಾರುಕಟ್ಟೆಯಲ್ಲೂ ಸಕಾರಾತ್ಮಕ ಪರಿಣಾಮ ಬೀರಿದೆ. ಸುದ್ದಿ ಹೊರಬಿದ್ದ ತಕ್ಷಣವೇ ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಜಾಗತಿಕ ರಾಜಕೀಯ ಹಾಗೂ ಆರ್ಥಿಕ ವೇದಿಕೆಯಲ್ಲಿ ಭಾರತ ಮತ್ತು ಅಮೆರಿಕದ ಬಾಂಧವ್ಯ ಇನ್ನಷ್ಟು ಬಲಗೊಳ್ಳುವ ಸೂಚನೆ ಇದಾಗಿದ್ದು, ಭವಿಷ್ಯದಲ್ಲಿ ವ್ಯಾಪಾರ, ತಂತ್ರಜ್ಞಾನ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಮೂಡಿದೆ.

ಇದನ್ನು ಓದಿ : https://vijayatimes.com/sit-investigation-cj-roy-death/

Tags: moditaxTrumpwashington

Related News

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026
ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ: ಮತ್ತೆ 9 ತಾಲೂಕು ಬರಪೀಡಿತ ಪಟ್ಟಿಗೆ, ಒಟ್ಟು ಸಂಖ್ಯೆ 226ಕ್ಕೆ ಏರಿಕೆ
ಪ್ರಮುಖ ಸುದ್ದಿ

ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ: ಮತ್ತೆ 9 ತಾಲೂಕು ಬರಪೀಡಿತ ಪಟ್ಟಿಗೆ, ಒಟ್ಟು ಸಂಖ್ಯೆ 226ಕ್ಕೆ ಏರಿಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.