- US–Iran War: ಶಾಂತಿಗೆ ಮೂರು ಷರತ್ತು, ಜಾಗತಿಕ ಗಮನ ಸೆಳೆದ ಇರಾನ್ ಘೋಷಣೆ
- ಯುದ್ಧದಿಂದ ಉಂಟಾದ ನಷ್ಟಕ್ಕೆ ಪರಿಹಾರ ಮತ್ತು ಅಂತರರಾಷ್ಟ್ರೀಯ ಖಾತರಿ ನೀಡಬೇಕೆಂದು ಇರಾನ್ ಅಧ್ಯಕ್ಷರ ಹೇಳಿಕೆ
- ಇರಾನ್ ಹಕ್ಕುಗಳಿಗೆ ಮಾನ್ಯತೆ, ಯುದ್ಧ ಹಾನಿಗೆ ಪರಿಹಾರ ಹಾಗೂ ಭವಿಷ್ಯದಲ್ಲಿ ದಾಳಿ ಮಾಡಬಾರದು ಎಂದು ಇರಾನ್ ಬೇಡಿಕೆ
Iran: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ (usa condition to stop war) ನಡುವಿನ ಉದ್ವಿಗ್ನ ಪರಿಸ್ಥಿತಿಗೆ ಕೊನೆ ಕಾಣಿಸುವ ಸಾಧ್ಯತೆಗಳು ಕಾಣಿಸುತ್ತಿವೆ.
ಯುದ್ಧ ಪರಿಸ್ಥಿತಿಯನ್ನು ಅಂತ್ಯಗೊಳಿಸಲು ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿರುವುದಾಗಿ ಇರಾನ್ ಸರ್ಕಾರ ಸ್ಪಷ್ಟಪಡಿಸಿದೆ.
ಈ ಷರತ್ತುಗಳನ್ನು ಅಮೆರಿಕ ಹಾಗೂ ಅದರ ಮಿತ್ರ ರಾಷ್ಟ್ರಗಳು ಒಪ್ಪಿಕೊಂಡರೆ ಸಂಘರ್ಷವನ್ನು ನಿಲ್ಲಿಸಲು ಸಿದ್ಧವಿದ್ದೇವೆ ಎಂದು ಇರಾನ್ ತಿಳಿಸಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ (Masoud Pezeshkian) ಅವರು ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿಕೆ ನೀಡಿದ್ದು, ಇರಾನ್‌ನ ಕಾನೂನುಬದ್ಧ ಹಕ್ಕುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಯುದ್ಧದ ಸಮಯದಲ್ಲಿ ಇರಾನ್‌ಗೆ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು ಎಂದು ಅವರು ಹೇಳಿದ್ದಾರೆ.
ಇದಷ್ಟೇ ಅಲ್ಲದೆ ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ಆಕ್ರಮಣ ನಡೆಯದಂತೆ ದೃಢವಾದ (usa condition to stop war) ಅಂತರರಾಷ್ಟ್ರೀಯ ಖಾತರಿಗಳನ್ನು ನೀಡಬೇಕೆಂದು ಕೂಡ ಅವರು ಬೇಡಿಕೆ ಇಟ್ಟಿದ್ದಾರೆ.
ಇತ್ತೀಚೆಗೆ ರಷ್ಯಾ ಹಾಗೂ ಪಾಕಿಸ್ತಾನದ ನಾಯಕರೊಂದಿಗೆ ನಡೆದ ಮಾತುಕತೆಯಲ್ಲಿಯೂ ಈ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾಗಿ ಪೆಜೆಶ್ಕಿಯಾನ್ ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಇರಾನ್ ಬದ್ಧವಾಗಿದೆ ಎಂಬುದನ್ನು ಅವರು ಪುನರುಚ್ಚರಿಸಿದ್ದಾರೆ. ಈ ಯುದ್ಧವನ್ನು ಪ್ರಚೋದಿಸಿದದ್ದು ಅಮೆರಿಕ ಮತ್ತು ಇಸ್ರೇಲ್ ಸರ್ಕಾರಗಳೇ ಎಂದು ಅವರು ಆರೋಪಿಸಿದ್ದಾರೆ.
ಯುದ್ಧದ ತೀವ್ರತೆ ಹೆಚ್ಚುತ್ತಿರುವ ನಡುವೆಯೇ ಜಗತ್ತಿನ ಅನೇಕ ರಾಷ್ಟ್ರಗಳು ಮಧ್ಯಸ್ಥಿಕೆಗೆ ಮುಂದಾಗುತ್ತಿರುವುದು ಗಮನಾರ್ಹವಾಗಿದೆ.
ಜಾಗತಿಕ ಆರ್ಥಿಕತೆ ಹಾಗೂ ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರುತ್ತಿರುವ ಈ ಸಂಘರ್ಷವನ್ನು ಶೀಘ್ರವೇ ಅಂತ್ಯಗೊಳಿಸಲು ಹಲವು ರಾಷ್ಟ್ರಗಳು ಪ್ರಯತ್ನಿಸುತ್ತಿವೆ.
ಇರಾನ್ ಮುಂದಿಟ್ಟಿರುವ ಮೂರು ಷರತ್ತುಗಳು ಈ ಯುದ್ಧಕ್ಕೆ ಅಂತ್ಯ ತರಬಹುದೇ ಎಂಬುದು ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಇದಕ್ಕೂ ಮೊದಲು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಬೇಷರತ್ತಾಗಿ ಶರಣಾಗಬೇಕು ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ (Pezeshkian), ಅದು ಕೇವಲ ಅಮೆರಿಕದ ಕಲ್ಪನೆ ಮಾತ್ರ ಎಂದು ತಿರುಗೇಟು ನೀಡಿದ್ದರು.
ಈಗ ಇರಾನ್ ತನ್ನ ಷರತ್ತುಗಳನ್ನು ಮುಂದಿಟ್ಟಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳು ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನು ಓದಿ : https://vijayatimes.com/400-million-barrels-of-oil-release/